
- ಕಾಂಗ್ರೆಸ್ನಿಂದ ದೂರ ಸರಿಯುವ ನಿರ್ಧಾರ ಪ್ರಕಟಿಸಿದ ಮುದ್ದಹನುಮೇಗೌಡ
- ಪಕ್ಷದ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಮಾಜಿ ಸಂಸದ
"ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರುವ ಮಾತೇ ಇಲ್ಲ. ಹೀಗಾಗಿ ಪಕ್ಷದ ಸದಸ್ಯತ್ವದಿಂದ ಬಿಡುಗಡೆ ಕೋರಿ ಪಕ್ಷದ ಅಧ್ಯಕ್ಷರು ಹಾಗೂ ವಿಪಕ್ಷ ನಾಯಕರಿಗೆ ಮನವಿ ಮಾಡಿದ್ದೇನೆ" ಎಂದು ಕಾಂಗ್ರೆಸ್ನ ಮಾಜಿ ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷದೊಂದಿನ ಬಾಂಧವ್ಯ ಮುಗಿದಿದೆ. ಹೀಗಾಗಿ ಮರಳಿ ಪಕ್ಷ ಸೇರುವುದಿಲ್ಲ. ಮುಂದೆ ಸ್ವಂತಂತ್ರ ರಾಜಕಾರಣ ಮಾಡಬೇಕೆಂದಿದ್ದೇನೆ. 2023ರಲ್ಲಿ ಕುಣಿಗಲ್ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದೇನೆ, ಪಕ್ಷೇತರನಾಗಿಯೋ ಅಥವಾ ಮತ್ತೊಂದು ಪಕ್ಷದಿಂದಲೋ ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ" ಎಂದು ಅವರು ತಿಳಿಸಿದರು.

ಗುರುವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮುದ್ದಹನುಮೇಗೌಡ ತಮ್ಮ ಮುಂದಿನ ನಡೆಯ ಬಗ್ಗೆ ಇಬ್ಬರೂ ನಾಯಕರೊಂದಿಗೆ ಚರ್ಚೆ ನಡೆಸಿದರು.
ಸಂಸತ್ ಚುನಾವಣೆ ವೇಳೆ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಮುದ್ದಹನುಮೇಗೌಡ ಸ್ವತಂತ್ರ ಉಮೇದುವಾರಿಕೆ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ತೊರೆದ ವಿಧಾನ ಪರಿಷತ್ ಮಾಜಿ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ
ಈ ಕಾರಣಕ್ಕೆ ಕಾಂಗ್ರೆಸ್, ಮುದ್ದಹನುಮೇಗೌಡರಿಗೆ ನೊಟೀಸ್ ಜಾರಿ ಮಾಡಿ ಶಿಸ್ತುಕ್ರಮ ಜರುಗಿಸಿತ್ತು. ಅಂದಿನಿಂದ ಕಾಂಗ್ರೆಸ್ನೊಂದಿಗಿನ ಒಡನಾಟವನ್ನು ಮುದ್ದುಹನುಮೇಗೌಡ ಕಡಿದುಕೊಂಡಿದ್ದರು. ಈ ಬೆಳವಣಿಗೆಗಳಿಗೂ ಮೊದಲು ಮುದ್ದಹನುಮೇಗೌಡ ತುಮಕೂರು ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿದ್ದರು.