
- ಕೃಷ್ಣ, ಭದ್ರಾ, ಮಹದಾಯಿ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರದೊಂದಿಗೆ ಚರ್ಚೆ
- ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲ ಸಚಿವ
ಕೃಷ್ಣ, ಭದ್ರಾ ಮೇಲ್ದಂಡೆ ಮತ್ತು ಮಹದಾಯಿ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ರಾಜ್ಯ ನಿರಾವರಿ ಸಚಿವ ಎಂ ಗೋವಿಂದ ಕಾರಜೊಳ ಮನವಿ ಮಾಡಿದರು.
ಗುರುವಾರ ನವದೆಹಲಿಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತಂತೆ ಒಪ್ಪಿಗೆ ಪಡೆದುಕೊಳ್ಳಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಗೋವಿಂದ ಕಾರಜೋಳ ಇಂದು( ನ.10) ಜಲಶಕ್ತಿ ಸಚಿವರೊಂದಿಗೆ ಮಾತುಕತೆ ನಡೆಸಿ, ಈ ಸಮಸ್ಯೆಗಳ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕಾರಜೋಳ ವಿಸ್ತೃತವಾಗಿ ಚರ್ಚಿಸಿದರು.
ನೀರಿನ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದಿಂದ ಸಿಗಬೇಕಾದ ಅನುಮೋದನೆಗಳ ಬಗ್ಗೆ ಗೋವಿಂದ ಕಾರಜೋಳ ಮಾಹಿತಿ ನೀಡಿದರು. ಯೋಜನೆ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಜಲ ಶಕ್ತಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಈ ಸುದ್ದಿ ಓದಿದ್ದೀರಾ? : ಪರಿಸರಕ್ಕೆ ಧಕ್ಕೆಯಾಗದಂತೆ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಮಾಡುತ್ತೇವೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ತಮಗೆ ಸಲ್ಲಿಕೆಯಾದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಶಕ್ತಿ ಸಚಿವರು, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಜಲ ಮಂತ್ರಾಲಯದಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.