ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ | ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು: ಬೊಮ್ಮಾಯಿ

Basavaraj Bommai

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಸರ್ವಪಕ್ಷಗಳ ಮುಖಂಡರ ಸಭೆ ನಡೆದ ನಂತರ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, “ನ್ಯಾ. ನಾಗಮೋಹನ್ ದಾಸ್ ವರದಿ ಪ್ರಕಾರ ಎಸ್ ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ‌ಹಾಗೂ ಎಸ್ ಟಿ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

Eedina App

“ರಾಜ್ಯದಲ್ಲಿನ ಇತರ ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳು ಮತ್ತು ಆಯೋಗಗಳು ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಆ ಆಯೋಗಗಳು ಅಂತಿಮ ವರದಿ ಸಲ್ಲಿಸಿದ ನಂತರ ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಬೊಮ್ಮಾಯಿ ಹೇಳಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app