ವಿಧಾನ ಪರಿಷತ್ ಉಪ ಚುನಾವಣೆ | ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

Baburao chinchanasuru
  • ಸಿ ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನ
  • ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಿಂಚನಸೂರ್

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾ ಆಯೋಗ ಉಪಚುನಾವಣೆ ಘೊಷಣೆ ಮಾಡಿತ್ತು. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಏಕಮಾತ್ರ ಅಭ್ಯರ್ಥಿ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪುನಃ ಕನ್ನಡ ಕಡೆಗಣನೆ| ಬೊಮ್ಮಾಯಿ ಮೌನಕ್ಕೆ ಕನ್ನಡಿಗರ ಆಕ್ರೋಶ

ಬಿಜೆಪಿಗೆ ಬಹುಮತ ಇದ್ದ ಕಾರಣ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರಲಿಲ್ಲ. ಚಿಂಚನಸೂರ್ ಹೊರತುಪಡಿಸಿ ಬೇರೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ. ನಾಮಪತ್ರ ವಾಪಸ್ ಪಡೆಯಲು ಗುರುವಾರ (ಆ.4) ಕಡೆಯ ದಿನವಾಗಿತ್ತು. ಯಾವ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಿಂಚಸೂರ್ ಅವರ ಅಧಿಕಾರ ಅವಧಿಯು 2024 ಜೂನ್‌ 17ರ ವರೆಗೆ ಇರಲಿದೆ. 

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಬಾಬುರಾವ್ ಚಿಂಚನಸೂರ್ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. 2018ರ ಚುನಾವಣೆಯಲ್ಲಿ ಗುರುಮಿಟಕಲ್ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು. ಈಗ ಬಿಜೆಪಿಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್