ಒಂದು ನಿಮಿಷದ ಓದು: ಎಸಿಬಿ ರದ್ದು ವಿಚಾರ; ಹೈಕೋರ್ಟ್‌ ಆದೇಶ ಪಾಲಿಸುತ್ತೇವೆ: ಸಿಎಂ ಬೊಮ್ಮಾಯಿ

"ಎಸಿಬಿ ರದ್ದು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ( ಆಗಸ್ಟ್‌ 23) ಬೆಂಗಳೂರಿನಲ್ಲಿ ಮಾತನಾಡಿದ ಅವರು, "ನಮ್ಮ ಸರ್ಕಾರದ ಹಿಂದಿನ ನಿರ್ಧಾರಕ್ಕೆ ನಾವು ಬದ್ಧ" ಎಂದರು.

ಎಸಿಬಿ ರದ್ದು ಮಾಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸಿದೆ ಎಂಬ ಸುದ್ದಿಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, "ಎಸಿಬಿ ರದ್ದು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ನಮ್ಮ ನಿಲುವು ಸ್ಪಷ್ಟವಾಗಿದೆ. ಹೈಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ" ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app