ಇರುವ ಇನ್ನೂರು ಜನರಲ್ಲಿ ಇಬ್ಬರೇ ಖಾಯಂ ನೌಕರರು; ಸ್ಮಶಾನ ಕಾರ್ಮಿಕರ ಕಥೆ-ವ್ಯಥೆ 

  • ಗುತ್ತಿಗೆ ಸ್ಮಶಾನ ಕಾರ್ಮಿಕರಿಗೆ ಖಾಯಂ ಹುದ್ದೆಯಷ್ಟೇ ಸಮಾನ ವೇತನ
  • ಸ್ಮಶಾನ ಕಾರ್ಮಿಕರ ಕುಟುಂಬಕ್ಕಾಗಿ ಹೊಸ ಯೋಜನೆ ರೂಪಿಸಲು ಚಿಂತನೆ 

"ರಾಜ್ಯದಲ್ಲಿ 200 ಸ್ಮಶಾನ ಕಾರ್ಮಿಕರಿದ್ದಾರೆ. ಇವರಲ್ಲಿ ಇಬ್ಬರಷ್ಟೇ ಖಾಯಂ ನೌಕರರಾಗಿದ್ದಾರೆ". ಇದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆ.

ವಿಧಾನಸೌಧದಲ್ಲಿಂದು (ಸೆ.19) ಸ್ಮಶಾನ ಕಾರ್ಮಿಕರರೊಂದಿಗೆ ಸಭೆ ನಡೆಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರ ಕುಂದುಕೊರತೆಗಳನ್ನು ಆಲಿಸಿದರು.

ಬಳಿಕ ಈ ವಿಚಾರವಾಗಿ ಮಾತನಾಡಿದ ಅವರು, ಸ್ಮಶಾನ ಕಾರ್ಮಿಕರು ಸ್ಮಶಾನಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾರ್ಮಿಕ ವರ್ಗವಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 200 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಇಬ್ಬರು ಮಾತ್ರ ಖಾಯಂ ಸಿಬ್ಬಂದಿಯಾಗಿದ್ದಾರೆ. ಉಳಿದ 148 ಸಿಬ್ಬಂದಿಗೆ ನೇರ ವೇತನ ಪಡೆಯುತ್ತಿದ್ದು ಅವರನ್ನು ಖಾಯಂ ಗೊಳಿಸುವ ಅಥವಾ ಅವರಿಗೆ ಖಾಯಂ ಹುದ್ದೆಯ ಸಮಾನ ವೇತನ ನೀಡುವ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

"ಪ್ರತಿ ಕಂದಾಯ ಗ್ರಾಮಕ್ಕೊಂದು ಸ್ಮಶಾನ ಇರಬೇಕೆಂದು ಪ್ರಸ್ತಾವನೆ ಇದೆ. ಅಲ್ಲದೆ ಮಹಾನಗರ ಪಾಲಿಕೆಗಳು, ನಗರಸಭೆ, ಪಟ್ಟಣ ಪಂಚಾಯ್ತಿ, ಪುರಸಭೆ, ಗ್ರಾಮ ಪಂಚಾಯ್ತಿ ಗಳಲ್ಲಿನ ಸ್ಮಶಾನಗಳಲ್ಲಿ ಕೆಲಸ ನಿರ್ವಹಿಸುವವರ ಮಾಹಿತಿಯನ್ನು ಕ್ರೋಢೀಕರಿಸಿ ಅವರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆದಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಸಿದ್ಧಪಡಿಸಲು ಶೀಘ್ರವೇ ಸಂಬಂಧಿಸಿದ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು ಅಭಿವೃದ್ಧಿ | ನಾನು ಅಡ್ಡಿಪಡಿಸಿದ್ದೆ ಎನ್ನುವವರು ಸಾಕ್ಷಿ ನೀಡಿದರೆ, ರಾಜಕೀಯ ನಿವೃತ್ತಿ: ಎಚ್ ಡಿಕೆ ಸವಾಲ್

ಸ್ಮಶಾನ ಕಾರ್ಮಿಕರಿಗೆ ವಸತಿ ಯೋಜನೆ, ಅವರ ಮಕ್ಕಳಿಗೆ ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವ ಹಾಗೂ ಪಡಿತರ ವಿತರಣೆ ಯೋಜನೆಗಳನ್ನು ರೂಪಿಸುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು.

ನಿಮಗೆ ಏನು ಅನ್ನಿಸ್ತು?
0 ವೋಟ್