ಒಂದು ನಿಮಿಷದ ಓದು| ವಕ್ಫ್ ಬೋರ್ಡ್ ಉಪಾಧ್ಯಕ್ಷ ನೇಮಕ: ಟೀಕೆಗಳ ನಂತರ ಆದೇಶ ತಡೆಹಿಡಿದ ಸರ್ಕಾರ

"ಪರೇಶ್ ಮೇಸ್ತ ಕೊಲೆಯ ಆರೋಪಿಯನ್ನು ವಕ್ಫ್ ಬೋರ್ಡ್ ಉಪಾಧ್ಯಕ್ಷನನ್ನಾಗಿ ಮಾಡಹೊರಟಿರುವುದು ಅಕ್ಷಮ್ಯ" ಎಂದು ವಿಧಾನಸಭೆ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, "ಬಿಜೆಪಿ ಸರ್ಕಾರದ ಈ ನಡೆಯೇ ಅನುಮಾನಾಸ್ಪದ" ಎಂದಿದ್ದಾರೆ.

"ಪರೇಶ್ ಮೇಸ್ತ ಕೊಲೆಗೂ ಆಝಾದ್ ಅಣ್ಣಿಗೇರಿ ಸರ್ಕಾರಿ ನೇಮಕಾತಿಗೂ ಇರುವ ಒಳ ಒಪ್ಪಂದ ಏನು ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ನಾಡಿಗೆ ಸ್ಪಷ್ಟಪಡಿಸಬೇಕು" ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಜೊತೆಗೆ ಇಲ್ಲಿಯವರೆಗೆ ರಾಜ್ಯದಲ್ಲಿ ನಡೆದಿರುವ ಬಿಜೆಪಿ ಕಾರ್ಯರ್ತರ ಕೊಲೆ ಜತೆಗೆ ಎಲ್ಲ ಕೋಮು ಕೊಲೆಗಳನ್ನು, ಗಲಭೆಗಳನ್ನು ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Image

ಮತ್ತೊಂದೆಡೆ ವಿಪಕ್ಷ ಹಾಗೂ ಸಾರ್ವಜನಿಕ ವಲಯದಲ್ಲಿ ವಕ್ಫ್ ಬೋರ್ಡ್ ಉಪಾಧ್ಯಕ್ಷರ ನೇಮಕಾತಿ ವಿಚಾರದ ಬಗ್ಗೆ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಆಝಾದ್ ಅಣ್ಣಿಗೇರಿ ನೇಮಕ ಮಾಡಲು ಹೊರಟಿದ್ದ ಸರ್ಕಾರವು, ತನ್ನ ಆದೇಶವನ್ನು ತಡೆಹಿಡಿದಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್