ನ. 11ಕ್ಕೆ ಪ್ರಧಾನಿ ಭೇಟಿ | ಸಂಚಾರ ವ್ಯವಸ್ಥೆಗೆ ಅಡಚಣೆ ಆಗದಂತೆ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

  • ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ
  • 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ

"ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಮತ್ತು ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಿ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನವೆಂಬರ್ 11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಎರಡರ ಉದ್ಘಾಟನೆ ಮತ್ತು ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪೂರ್ವಭಾವಿ ಸಭೆ ನಡೆಸಿದರು.

Eedina App

ಎಲ್ಲ ಜಿಲ್ಲೆಗಳಿಂದ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಪಿಡಿಓಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ನಿರುದ್ಯೋಗಿಗಳಿಗೆ ದೀಪಾವಳಿ ಉಡುಗೊರೆ | 75 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಲಿದ್ದಾರೆ ಮೋದಿ

AV Eye Hospital ad

ವಿವಿಧ ಜಿಲ್ಲೆಗಳಿಂದ ಮಣ್ಣು ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು, 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮಣ್ಣು ಸಂಗ್ರಹಿಸಲಾಗುವುದು ಎಂದು ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಸಿ ಎನ್ ಅಶ್ವತ್ಥ ನಾರಾಯಣ, ಡಾ. ಕೆ ಸುಧಾಕರ್, ಬಿ ಎ ಬಸವರಾಜ, ಕೆ ಗೋಪಾಲಯ್ಯ, ಕೆ ಸಿ ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app