ಹುಬ್ಬಳ್ಳಿ | ರಾಷ್ಟ್ರಧ್ವಜ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

  •  ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ 'ನೂತನ ಧ್ವಜ ಸಂಹಿತೆ' 
  •  ಬೆಂಗೇರಿ ರಾಷ್ಟ್ರಧ್ವಜ ತಯಾರಿಕಾ ಘಟಕಕ್ಕೆ ರಾಹುಲ್ ಗಾಂಧಿ  ಭೇಟಿ

ಕೇಂದ್ರ ಸರ್ಕಾರ ಜಾರಿ ತಂದಿರುವ ‘ಭಾರತದ ಧ್ವಜ ಸಂಹಿತೆ ʼ ನೀತಿ ವಿವಾದ ಕಿಡಿ ಹೊತ್ತಿಸಿರುವ ಬೆನ್ನಲ್ಲೇ ರಾಜ್ಯದ ಹುಬ್ಬಳ್ಳಿ-ಧಾರವಾಡದ ಬೆಂಗೇರಿ ಖಾದಿ ಗ್ರಾಮೋದ್ಯೋಗದ ರಾಷ್ಟ್ರಧ್ವಜ ತಯಾರಿಕಾ ಘಟಕಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದರು.

ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬುಧವಾರ ಸಂಜೆ ಹುಬ್ಬಳ್ಳಿಗೆ ತೆರಳುವ ವೇಳೆ ಅವರು ಬೆಂಗೇರಿಗೆ ಭೇಟಿ ನೀಡಿದರು.

ಈ ಸುದ್ದಿ ಓದಿದ್ದೀರಾ? : ಕೇಂದ್ರ ಸರ್ಕಾರದ ನೂತನ ಧ್ವಜ ಸಂಹಿತೆ ಜಾರಿ ಎಫೆಕ್ಟ್ : ಮುಚ್ಚಿ ಹೋಗುವ ಆತಂಕದಲ್ಲಿ ಕರ್ನಾಟಕದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, "ಸಣ್ಣ ಮತ್ತು ಮಧ್ಯಮ ವರ್ಗದವರು ನಡೆಸುತ್ತಿರುವ ಉದ್ಯಮ ನಡೆಯದಂತೆ ಮೋದಿ ಸರ್ಕಾರ ಬಯಸುತ್ತಿದೆ. ಅವರ ಪರವಾಗಿರುವ ಮೂರು ನಾಲ್ಕು ಮಂದಿ ಬೃಹತ್ ಉದ್ಯಮಿಗಳು ಇದನ್ನು ಮಾಡಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಅವರು ಕೆಲವು ನಿಯಮಗಳನ್ನು ಬದಲಾವಣೆ ಮಾಡಿದ್ದಾರೆ. ಮಧ್ಯಮ ವರ್ಗದ ಕೈಯಲ್ಲಿರುವ ಹಣವನ್ನು ಬೃಹತ್ ಉದ್ಯಮಿಗಳಿಗೆ ನೀಡುತ್ತಿದ್ದಾರೆ. ನರೇಂದ್ರ ಮೋದಿ ಸರ್ಕಾರದ ನೋಟು ಅಮಾನ್ಯೀಕರಣ, ಜಿಎಸ್‌ಟಿ, ರೈತ ಕಾನೂನುಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ನಮಗೆ ತಿಳಿದು ಬರುವುದು ಅವರ ಈ ದೇಶದ ಬಡವರ ಪರ ಇಲ್ಲ. ಇದನ್ನು ಜನರು ಅರ್ಥೈಸಿಕೊಳ್ಳಬೇಕು" ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. 

ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮತ್ತಿತರರು ಜತೆಗಿದ್ದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ‘ಭಾರತದ ಧ್ವಜ ಸಂಹಿತೆ’ ನಿಯಮದಲ್ಲಿ ಭಾರೀ ಬದಲಾವಣೆ ಮಾಡಿದ್ದು, ಹೊಸ ತಿದ್ದುಪಡಿಗಳನ್ನು ಜಾರಿಗೆ ತಂದಿದೆ. ಈ ಹೊಸ ಧ್ವಜ ಸಂಹಿತೆಯು ಜಾರಿಯಾಗುತ್ತಿದ್ದಂತೆ, ಕರ್ನಾಟಕದ ಖಾದಿ ಉದ್ಯಮಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ಮುಂದಿನ ದಿನಗಳಲ್ಲಿ ಮುಚ್ಚಿ ಹೋಗುವ ಆತಂಕ ನಿರ್ಮಾಣವಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್