ಒಂದು ನಿಮಿಷದ ಓದು | ಕೇಂದ್ರದ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತರನ್ನು ಸೇರಿಸಿ; ಸಿಎಂ ಒತ್ತಾಯಿಸಿದ ಮಹಾಸಭೆ

ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.

ಮಂಗಳವಾರ ಸಂಜೆ ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಹಾಸಭಾ ಸದಸ್ಯರು ಮನವಿ ಸಲ್ಲಿಸಿದರು. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಷ್ಟ್ರೀಯ ಉಪಾಧ್ಯಕ್ಷ ಎನ್ ತಿಪ್ಪಣ್ಣ, ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ , ಶಾಸಕರಾದ ಪರಣ್ಣ ಮುನವಳ್ಳಿ, ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹಾಜರಿದ್ದರು.

ನಿಮಗೆ ಏನು ಅನ್ನಿಸ್ತು?
1 ವೋಟ್