
- ನವರಾತ್ರಿ ಸಂಭ್ರಮಕ್ಕೆ ಸರ್ಕಾರ ಕರೆಂಟ್ ಶಾಕ್ ನೀಡಿದೆ
- ಬಡವರ ಸುಲಿದು ಶ್ರೀಮಂತರ ಜೇಬು ತುಂಬಲಾಗುತ್ತಿದೆ
ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ʼಬಡವರನ್ನು ಸುಲಿದು ಬಿಸಿನೆಸ್ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಅವರ ಟ್ವೀಟ್ ಸಾರಾಂಶ ಹೀಗಿದೆ:
ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ @BJP4Karnataka ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ. 1/4#ನವರಾತ್ರಿಗೆ_ಕರೆಂಟ್_ಶಾಕ್
— H D Kumaraswamy (@hd_kumaraswamy) September 24, 2022
"ಸರ್ಕಾರ ಕಳೆದ ಜುಲೈನಲ್ಲಿ ದರ ಏರಿಸಿ ಬರೆ ಎಳೆದಿತ್ತು. ಈಗ ಮತ್ತೆ ವಿದ್ಯುತ್ ದರ ಏರಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ. ಈ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾ ತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲ ಬೆಲೆ ಇಳಿಸದ ಕೇಂದ್ರದ ಸರಕಾರದ ಹಾದಿಯಲ್ಲೇ ರಾಜ್ಯ ಸರ್ಕಾರವೂ ಸಾಗುತ್ತಿದೆ" ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? : ದುಬಾರಿ ದುನಿಯಾ | ಎರಡು ತಿಂಗಳಲ್ಲಿ ಎರಡನೇ ಬಾರಿ ವಿದ್ಯುತ್ ದರ ಹೆಚ್ಚಳ
"ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ. ವಿದ್ಯುತ್ ಸೋರಿಕೆ, ಕಳವು ತಡೆಯಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರ್ಕಾರ ಬಡಜನರಿಗೆ ಅದರ ಹೊರೆ ಹೊರಿಸಿ ಉಳ್ಳವರ ಜೇಬು ತುಂಬಿಸಲು ಹೊರಟಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.