ಮುಖ್ಯಮಂತ್ರಿ ಸ್ಥಾನದಿಂದ ಬೊಮ್ಮಾಯಿ ಬದಲಾಯಿಸುವ ಪ್ರಶ್ನೆಯೇ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

  • ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಅಬಾಧಿತ
  • ಮುಂದಿನ ಚುನಾವಣೆಗೂ ಬಸವರಾಜ ಬೊಮ್ಮಾಯಿ ಅವರದ್ದೇ ನಾಯಕತ್ವ 

"ಕಾಮನ್ ಮ್ಯಾನ್ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ" ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ನವದೆಹಲಿಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, "ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ, ರೈತರ ಪರವಾಗಿ, ಯುವ ಸಮೂಹದ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ, ಹೀಗಾಗಿ ಬದಲಾವಣೇ ವಿಚಾರ ಸದ್ಯಕ್ಕಿಲ್ಲ" ಎಂದು ತಿಳಿಸಿದರು.

"ಮುಂದಿನ ಚುನಾವಣೆಯನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸುತ್ತೇವೆ. 150 ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ" ಎಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? : ಸಿಎಂ ಬದಲಾವಣೆ ಚರ್ಚೆಯಲ್ಲಿ ಯಾವುದೇ ಹುರುಳಿಲ್ಲ: ಬಸವರಾಜ ಬೊಮ್ಮಾಯಿ

"ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಅನವಶ್ಯಕ ಗೊಂದಲ ಹುಟ್ಟು ಹಾಕುತ್ತಿದೆ. ಇದು ಕಾಂಗ್ರೆಸ್ ಷಡ್ಯಂತ್ರ. ಸಿದ್ದರಾಮಯ್ಯ ಡಿಕೆಶಿ ನಡುವೆ ಒಡಕಿದೆ. ಅದನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ" ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್