ರಾಜ್ಯಕ್ಕೆ ಎಸ್ ನಿಜಲಿಂಗಪ್ಪನವರ ಕೊಡುಗೆ ಅಪಾರ: ವಸತಿ ಸಚಿವ ವಿ ಸೋಮಣ್ಣ

V Somanna
  • ವಿಧಾನಸೌಧದಲ್ಲಿ ದಿ. ನಿಜಲಿಂಗಪ್ಪನವರ 22ನೇ ಪುಣ್ಯತಿಥಿ ಆಚರಣೆ
  • ಕರ್ನಾಟಕ ಮತ್ತು ಬೆಂಗಳೂರಿಗೆ ನಿಜಲಿಂಗಪ್ಪನವರ ಕೊಡುಗೆ ಅಪಾರ

ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್ ನಿಜಲಿಂಗಪ್ಪನವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆಗೆ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ ಸೋಮಣ್ಣ ಮಾಲಾರ್ಪಣೆ ಮಾಡಿದರು.

ಮಾಲಾರ್ಪಣೆ ನಂತರ ಮಾತನಾಡಿದ ಅವರು, “ನಿಜಲಿಂಗಪ್ಪನವರ 22ನೇ ಪುಣ್ಯತಿಥಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅನುಪಸ್ಥಿತಿಯಲ್ಲಿ ಸರ್ಕಾರದ ವತಿಯಿಂದ ಆಚರಿಸಿದ್ದೇವೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದಲ್ಲಿ ನೂರಾರು ಯೋಜನೆಗಳಿಗೆ ಚಾಲನೆ ನೀಡಿದ್ದರು” ಎಂದು ಹೇಳಿದರು. 

“ಪ್ರಧಾನಿಯಾಗುವ ಅವಕಾಶ ಇದ್ದಾಗಲೂ ಅದನ್ನು ತೊರೆದು ಜನಸೇವೆ ಮಾಡಿದವರು. ಕರ್ನಾಟಕ ಮತ್ತು ಬೆಂಗಳೂರಿಗೆ ನಿಜಲಿಂಗಪ್ಪನವರ ಕೊಡುಗೆ ಅಪಾರ. ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ” ಎಂದು ತಿಳಿಸಿದರು. 

ಈ ಸುದ್ದಿ ಓದಿದ್ದೀರಾ?: ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ್ರಾ?: ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಮಳೆ ಹಾನಿ ವಿಚಾರವಾಗಿ ಮಾತನಾಡಿದ ಸಚಿವರು, “ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸಾಕಷ್ಟು ಕೆಲಸ ಮಾಡ್ತಿದ್ದಾರೆ. ರಾಜ್ಯ ಸರ್ಕಾರದಿಂದ 800 ಕೋಟಿ ರೂ.ಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದ್ದೇವೆ” ಎಂದು ಹೇಳಿದರು.‌

“ಕೋವಿಡ್‌ ಸೋಂಕಿನ ನೋವಿನಲ್ಲೂ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಪ್ರಕೃತಿಯಿಂದ ಆಗಿರುವ ಅನಾಹುತವನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸುತ್ತದೆ” ಎಂದು ಭರವಸೆ ನೀಡಿದರು. 

ನಿಮಗೆ ಏನು ಅನ್ನಿಸ್ತು?
0 ವೋಟ್