ವಿಜಯನಗರ| ಸಚಿವ ಆನಂದ್ ಸಿಂಗ್ ವಿರುದ್ಧ 'ಅಟ್ರಾಸಿಟಿ ಕೇಸ್' ದಾಖಲು

  • ಪೆಟ್ರೋಲ್ ಸುರಿದು ಸುಟ್ಟು ಹಾಕುತ್ತೇನೆ ಎಂದು ಬೆದರಿಕೆ ಆರೋಪ
  • ಹೊಸಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಪೆಟ್ರೋಲ್ ಸುರಿದು ಸುಟ್ಟು ಹಾಕುತ್ತೇನೆ ಬೆದರಿಕೆ ಹಾಕಿದ್ದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ವಿಜಯನಗರ ಜಿಲ್ಲೆ ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ 'ಅಟ್ರಾಸಿಟಿ' ಪ್ರಕರಣ ದಾಖಲಾಗಿದೆ.

"ಡಿ ಪೋಲಪ್ಪ ಎಂಬವರು ಕೊಟ್ಟ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ (ಐ ಪಿ ಸಿ) ಸೆಕ್ಷೆನ್ 504, 506ರ ಅಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಅನ್ವಯ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜತೆಗೆ ಪೆಟ್ರೋಲ್‌ ಸುರಿದುಕೊಂಡವರ ವಿರುದ್ಧವೂ ಕೂಡ ಪ್ರಕರಣ ದಾಖಲಿಸಲಾಗಿದೆ" ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ಮಾಹಿತಿ ನೀಡಿದ್ದಾರೆ.

Image
vijayanagar

ಎಸ್ಪಿ ಕಚೇರಿ ಎದುರು ಪೆಟ್ರೊಲ್ ಸುರಿದುಕೊಂಡು ಪ್ರತಿಭಟನೆ

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಡಿ. ಪೋಲಪ್ಪ ಎಂಬುವರು ತಮ್ಮ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ವಿಜಯನಗರ ನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದರು.

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಅವರನ್ನು ತಡೆದಿದ್ದಾರೆ. ನಂತರ ಮೈಮೇಲೆ ನೀರು ಹಾಕಿ, ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.

“ಆನಂದ್ ಸಿಂಗ್ ಅವರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಸಿದ್ದಾರೆ. ಅದನ್ನು ತೆರವುಗೊಳಿಸುವಂತೆ ವರ್ಷದ ಹಿಂದೆ ದಾಖಲೆಗಳ ಸಮೇತ ದೂರು ಕೊಟ್ಟಿದ್ದೆ. ಇತ್ತೀಚೆಗೆ ನಗರಸಭೆ ಪೌರಾಯುಕ್ತರ ಗಮನಕ್ಕೂ ತಂದಿದ್ದೆ. ಅದಕ್ಕಾಗಿ ನನಗೆ ಈ ಹಿಂದೆ ಜೀವ ಬೆದರಿಕೆ ಹಾಕಿದ್ದರು” ಎಂದು ಡಿ. ಪೋಲಪ್ಪ ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ ? ನಿರ್ಮಾಪಕಿಯಾಗಿ ʼಆಪಲ್ ಬಾಕ್ಸ್ʼ ಹಿಡಿದು ಚಂದನವನಕ್ಕೆ ಮರಳಿದ ಮೋಹಕ ತಾರೆ ರಮ್ಯಾ

“ಮಂಗಳವಾರ ಮಧ್ಯಾಹ್ನ 35 ರಿಂದ 40 ಜನರೊಂದಿಗೆ ಏಕಾಏಕಿ ನನ್ನ ಮನೆಗೆ ಬಂದು, ಪದೇ ಪದೇ ನನ್ನ ವಿರುದ್ಧ ದೂರು ಕೊಡುವುದು, ಮಾತನಾಡುತ್ತಿರುವುದು ಸರಿಯಲ್ಲ. ಚುನಾವಣೆ ಸಂದರ್ಭದಲ್ಲಿ ನನ್ನ ಹೆಸರು ಕೆಡಿಸಲು ಪ್ರಯತ್ನಿಸುತ್ತಿದ್ದೀರಿ. ನೀನು ಬದುಕಿದ್ದರೆ ತಾನೇ ಇದೆಲ್ಲ. ನಿನ್ನ ಕುಟುಂಬದವರನ್ನು ಜೀವ ಸಮೇತ ಉಳಿಸಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದರು. ನಗರಸಭೆಯವರನ್ನು ಕರೆಸಿ, ಇವರ ಆಸ್ತಿ ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಹೇಳಿ ಹೋದರು” ಆರೋಪಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
4 ವೋಟ್