140ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುತ್ತೇವೆ; ಬಿ ಎಸ್ ಯಡಿಯೂರಪ್ಪ

“ಬಿಜೆಪಿಯ ಎಲ್ಲ ಮುಖಂಡರು ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಎಲ್ಲರೂ ಸೇರಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುತ್ತೇವೆ" ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದರು.

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯನಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ, “ಯಾವುದೇ ಸ್ಥಾನಮಾನಗಳನ್ನು ನಾನು ಆಪೇಕ್ಷೆ ಪಟ್ಟಿರಲಿಲ್ಲ. ಕೇಂದ್ರ ಕೊಟ್ಟ ಜವಾಬ್ದಾರಿಯನ್ನ ನಿರ್ವಹಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ದಕ್ಷಿಣ ಭಾರತದ ರಾಜ್ಯಗಳ ಬಗ್ಗೆಯೂ ಗಮನ ಹರಿಸಲು ಸೂಚನೆ ನೀಡಲಾಗಿದೆ. ಜವಾಬ್ದಾರಿಯನ್ನು ವಿನಮ್ರತೆಯಿಂದ ಸ್ವೀಕರಿಸಿ ರಾಜ್ಯದಲ್ಲಿ ಓಡಾಡುವೆ. ಇನ್ನೂ ಹತ್ತು ವರ್ಷಗಳ ಕಾಲ ಪಕ್ಷ ಸಂಘಟಿಸುತ್ತೇನೆ” ಎಂದು ಹೇಳಿದರು.

“ನನಗೆ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್‌ಗೆ ಧನ್ಯವಾದಗಳು” ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ ಬಿಜೆಪಿ ಹೈಕಮಾಂಡ್‌ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧನ್ಯವಾದ ಸಮರ್ಪಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್