ಮರಾಠರಿಗೆ ಉದ್ಯೋಗ, ಶಿಕ್ಷಣದಲ್ಲಿ ಶೇ.10 ಮೀಸಲಾತಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಗೀಕಾರ

Date:

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಮರಾಠ ಮೀಸಲು ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು.

ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಸೂದೆಯನ್ನು ಮಂಡಿಸಿದ್ದು, ಮರಾಠ ಸಮುದಾಯಕ್ಕೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲು ಒದಗಿಸುವ ಉದ್ದೇಶ ಇದಾಗಿದೆ.ಮುಖ್ಯಮಂತ್ರಿ ಮಂಡಿಸಿದ ಮಸೂದೆ ಅವಿರೋಧವಾಗಿ ಅಂಗೀಕಾರಗೊಂಡಿದೆ.

ಮಸೂದೆಗೆ ಆಡಳಿತ ಪಕ್ಷ ಹಾಗೂ ವಿಪಕ್ಷ ಕೂಡ ಬೆಂಬಲ ವ್ಯಕ್ತಪಡಿಸಿದೆ. ವಿಪಕ್ಷ ಉದ್ಧವ್ ಠಾಕ್ರೆ ಬಣ ಮಾತ್ರ ಮಸೂದೆಗೆ ವಿರೋಧ ವ್ಯಕ್ತಪಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಾರಾಷ್ಟ್ರ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ಮಸೂದೆ 2024 ರ ಮಸೂದೆ ಕೂಡ  ಜಾರಿಯಾದ ನಂತರ, ಇದರ ಪರಿಶೀಲನೆಯನ್ನು 10 ವರ್ಷಗಳ ನಂತರ ತೆಗೆದುಕೊಳ್ಳಬಹುದು ಎಂದು ಪ್ರಸ್ತಾಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಸಿಎಂ ಏಕನಾಥ್ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಮೀಸಲಾತಿ ಮಸೂದೆ ಮಂಡಿಸುವುದಾಗಿ ಮರಾಠ ಮಿಸಲಾತಿ ಚಳುವಳಿಕಾರ ಮನೋಜ್ ಜರಂಗೆ ಪಾಟೀಲ್ ಅವರಿಗೆ ಭರವಸೆ ನೀಡಿದ್ದರು.

ಮನೋಜ್ ಜರಂಗೆ ಪಾಟೀಲ್ ಅವರು ಕಳೆದ ಏಳು ದಿನಗಳಿಂದ ಮರಾಠಿ ಮೀಸಲಾತಿ ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಕೈಗೊಂಡಿದ್ದಾರೆ.

ಮೀಸಲಾತಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನೋಜ್ ಜರಂಗೆ, “ ಇದು ಮರಾಠ ಸಮುದಾಯಕ್ಕೆ ಮಾಡಿದ ವಿಶ್ವಾಸದ್ರೋಹವಾಗಿದೆ. ಮರಾಠ ಸಮುದಾಯ ನಿಮ್ಮನ್ನು ನಂಬುವುದಿಲ್ಲ. ನಾವು ನಮ್ಮ ನಿಜವಾದ ಬೇಡಿಕೆಗಳಿಂದ ಮಾತ್ರ ಅನುಕೂಲ ಪಡೆಯುತ್ತೇವೆ. ಈ ಮೀಸಲಾತಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮೀಸಲಾತಿ ನೀಡಲಾಗಿದೆ ಎಂದು ಸರ್ಕಾರ ಈಗ ಸುಳ್ಳು ಹೇಳುತ್ತಿದೆ” ಎಂದು ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...