ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ; ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

  • ‘ಪಂಚಮಸಾಲಿ ಸಮುದಾಯದ ಹಣೆಗೆ ತುಪ್ಪ ಹಚ್ಚಿ ವಂಚನೆ’
  • ತಜ್ಞರೊಂದಿಗೆ ಚರ್ಚಿಸಿ ಸಂವಿಧಾನಾತ್ಮಕ ತೀರ್ಮಾನ: ಸಿಎಂ

ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪಂಚಮಸಾಲಿ ಸಮುದಾಯವನ್ನು 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಶುಕ್ರವಾರ ಅವರನ್ನು ಭೇಟಿ ಮಾಡಿ ಮನವಿ ಮಾಡಿತು.

“ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದಲ್ಲಿ ಅವರೂ ಮುಖ್ಯ ವಾಹಿನಿಗೆ ಬರಲು ಅನುಕೂಲವಾಗುತ್ತದೆ” ಎಂದು ಸ್ವಾಮೀಜಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದ ಮುಖ್ಯಮಂತ್ರಿಗಳು, ಮೀಸಲಾತಿ ವಿಚಾರವಾಗಿ ಆತುರದ ನಿರ್ಧಾರ ಸಲ್ಲದು. ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಮಾಡಬೇಕು. ಹಾಗಾಗಿ ಸಭೆ ಕರೆದು ಕೂಲಂಕಷವಾಗಿ ಚರ್ಚಿಸಲಾಗುವುದು” ಎಂದು ಸಿಎಂ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊಡಲು ನಿರಾಕರಿಸಿದ ಕೇಂದ್ರ ಸರ್ಕಾರ: ಜಾರಿ ಖಚಿತ ಎಂದ ಸಚಿವ ಕೆ.ಎಚ್ ಮುನಿಯಪ್ಪ

ನುಡಿದಂತೆ ನಡೆದವರು ನೀವು

ಚರ್ಚೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು, “ನುಡಿದಂತೆ ನಡೆದ ಮುಖ್ಯಮಂತ್ರಿಗಳು ನೀವು. ಬಸವಣ್ಣ ಅವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದವರು, ರಾಣಿ ಚನ್ನಮ್ಮ ಜಯಂತಿಯನ್ನು ಮೊದಲಬಾರಿಗೆ ಆಚರಿಸಿದವರು” ಎಂದು ಜಯಮೃತ್ಯುಂಜಯ ಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಮೀಸಲಾತಿ ವಿಚಾರದಲ್ಲಿ ಕಾಟಾಚಾರ ಮಾಡಲ್ಲ

“ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೇ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜತೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರು.

ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...