ಬೀದರ್‌ | 371(ಜೆ) ವಿಶೇಷ ಸ್ಥಾನಮಾನಕ್ಕೆ ದಶಕದ ಸಂಭ್ರಮ: ಫೆ. 20ರಂದು ಮಲ್ಲಿಕಾರ್ಜುನ ಖರ್ಗೆಗೆ ನಾಗರಿಕ ಸನ್ಮಾನ

Date:

ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಮಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಜಾರಿಗೊಳಿಸಿ ಹತ್ತು ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ಫೆ.20‌ ರಂದು ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ‌ ದಶಮಾನೋತ್ಸವ ಹಾಗೂ ಕಲಂ 371(ಜೆ) ತಿದ್ದುಪಡಿಯ ರೂವಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾಗರಿಕ ಅಭಿನಂದನಾ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

“ಕಾಂಗ್ರೇಸ್ ಪಕ್ಷದ‌ ಮುಖಂಡರು , ಪ್ರಗತಿಪರ, ದಲಿತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಸಹಯೋಗದಲ್ಲಿ ನಡೆಯುವ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಅಂದು ಬೆಳಿಗ್ಗೆ 11ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಚಾಲನೆ ನೀಡಿಲಿದ್ದಾರೆ. ಈಗಾಗಲೇ ಎಲ್ಲಾ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು” ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು. ಇದಕ್ಕಾಗಿ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ತರಬೇಕೆಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಅಂದಿನ ರಾಜ್ಯ ಕಾಂಗ್ರೇಸ್‌ ಸರ್ಕಾದ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದರು. ಆದರೆ, ಅಂದಿನ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಉಪಪ್ರಧಾನಿ, ಗೃಹಸಚಿವರಾಗಿದ್ದ ಎಲ್‌.ಕೆ.ಅಡ್ವಾಣಿ ಅವರು ಅದನ್ನು ತಿರಸ್ಕರಿಸಿದ್ದರು. ಅದಾದ ನಂತರ ಕೇಂದ್ರದಲ್ಲಿ ಮನಮೋಹನ್‌ ಸಿಂಗ್‌ ನೇತೃತ್ವದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂತು. ಕಾಂಗ್ರೇಸ್‌ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರು ಚುನಾವಣೆಯ ಸಂದರ್ಭದಲ್ಲಿ ವಿಶೇಷ ಸ್ಥಾನಮಾನದ ಭರವಸೆ ಕೊಟ್ಟಿದ್ದರು. ಅದಕ್ಕೆ ಮಲ್ಲಿಕಾರ್ಜುನ ಖರ್ಗೆಯವರು ಸತತವಾದ ಪ್ರಯತ್ನದಿಂದ ಪಟ್ಟು ಹಿಡಿದು ಮನವೊಲಿಸಿದರು. ಅಂದಿನ ಬೀದರ್‌ ಸಂಸದ ಎನ್‌.ಧರ್ಮಸಿಂಗ್‌ ಕೂಡ ಅದಕ್ಕೆ ಶ್ರಮಿಸಿದ್ದರು. ಅಂತಿಮವಾಗಿ 2013ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿ ವಿಶೇಷ ಸ್ಥಾನಮಾನ ಕಲ್ಪಿಸಲಾಯಿತು. ಈಗ ಹತ್ತು ವರ್ಷ ಪೂರ್ಣಗೊಂಡಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕ.ಕ. ಭಾಗದಲ್ಲಿ 371(ಜೆ) ವಿಶೇಷ ಸ್ಥಾನಮಾನ ಜಾರಿಯಾಗಿ ಹತ್ತು ವರ್ಷಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಈ ಭಾಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪ್ರತಿವರ್ಷ 3 ಸಾವಿರ ಕೋಟಿ ಅನುದಾನ ಬರುತ್ತಿದೆ. ಉನ್ನತ ಶಿಕ್ಷಣ, ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ದೊರೆಕಿದೆ. ಸಿಎಂ ಸಿದ್ದರಾಮಯ್ಯನವರು ಕೊಟ್ಟ ಮಾತಿನಂತೆ ಈ ವರ್ಷದ ಬಜೆಟ್‌ನಲ್ಲಿ ಕ.ಕ. ಭಾಗಕ್ಕೆ 5 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಹತ್ತು ವರ್ಷದ ಸಾಧನೆ ಜೊತೆಗೆ ಅದಕ್ಕಾಗಿ ಶ್ರಮಿಸಿದ ರೂವಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದನೆ ಸಮಾರಂಭ ಆಯೋಜಿಸಿಲಾಗಿದೆ” ಎಂದರು.

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಸುಪುತ್ರರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಕಾರ್ಯಕ್ಷೇತ್ರವಾಗಿ ಮಾಡಿಕೊಂಡು  50 ವರ್ಷಗಳ ಸುದೀರ್ಘ ರಾಜಕೀಯದಲ್ಲಿ ಗುರುತಿಸಿಕೊಂಡು ಉತ್ತಮ ಕೆಲಸ ಮಾಡಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಸಚಿವರಾಗಿ ಅನೇಕ ಹುದ್ದೆಗಳನ್ನು ಬಹಳ ಸಮರ್ಥವಾಗಿ ನಿಭಾಯಿಸಿ ಛಾಪು ಮೂಡಿಸಿದ್ದಾರೆ. ಈಗ ಎಐಸಿಸಿ ಅಧ್ಯಕ್ಷರಾಗಿ ದೇಶದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕಾರ್ಯ ಮಾಡುತ್ತಿದ್ದಾರೆ. ಯಾವುದೇ ಸಮುದಾಯಕ್ಕೆ ಸೀಮಿತರಾಗದೇ ಇಡೀ ರಾಷ್ಟ್ರ ನಾಯಕರಾಗಿ ಹೊರಹೊಮ್ಮಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ಮಲತಾಯಿ ಧೋರಣೆ; ಸಂಸದರ ಮನೆ ಎದುರು ಪ್ರತಿಭಟನೆ

ಪತ್ರಿಕಾಗೋಷ್ಠಿಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್‌, ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಮಾಜಿ ಶಾಸಕ ರಾಜಶೇಖರ ಪಾಟೀಲ ಹುಮನಾಬಾದ್‌, ಮಾಜಿ ಎಂಎಲ್ಸಿ ಪುಂಡಲೀಕರಾವ, ಮುಖಂಡರಾದ ಅಬ್ದುಲ್‌ ಮನ್ನಾನ್‌ ಸೇಠ್‌,ಅನಿಲ್‌ಕುಮಾರ್‌ ಬೆಲ್ದಾರ, ಬಸವರಾಜ ಮಾಳಗೆ, ಆನಂದ ದೇವಪ್ಪ ಲಕ್ಷ್ಮಣರಾವ ಬುಳ್ಳಾ ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

 ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ತುಮಕೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಮುಂದೆ ಹೋಗುತ್ತಿದ್ದದ  ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು...

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...