ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ; ವಿಪಕ್ಷಗಳು ಸಜ್ಜು

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡೆ, ಸಚಿವೆ ಅತಿಶಿ ಘೋಷಿಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧವಾಗಿ ಸ್ಪರ್ಧಿಸಲು ಸಜ್ಜಾಗಿರುವ ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವರದಿಗಳ ಮಧ್ಯೆ ಅತಿಶಿ ಪತ್ರಿಕಾಗೋಷ್ಠಿ ನಡೆಸಿ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ ಎಎಪಿ ಮಾತ್ರವಲ್ಲದೆ ಉಳಿದ ವಿಪಕ್ಷಗಳ ನಾಯಕರುಗಳು ಕೂಡಾ ಭಾಗಿಯಾಗಲಿದ್ದಾರೆ.

ಇದನ್ನು ಓದಿದ್ದೀರಾ?   ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇಂಡಿಯಾ ಮೈತ್ರಿಕೂಟ ಈಗ ಒಂದಾಗಿದೆ. ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಿದಾಗ ಪ್ರಮುಖ ಕಾಂಗ್ರೆಸ್ ನಾಯಕರುಗಳು ಕೂಡಾ ಅಲ್ಲಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಮೈತ್ರಿಕೂಟದ ಎಲ್ಲಾ ನಾಯಕರು ಧ್ವನಿ ಎತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಬಂಧನವು ಪ್ರಜಾಪ್ರಭುತ್ವದ ಕೊಲೆಗಾಗಿ ಮಾಡಲಾದ ಕೊನೆಯ ದಾಳಿಯಾಗಿದೆ. ನಾಳೆ ಇದರ ವಿರುದ್ಧ ಪ್ರತಿಪಕ್ಷಗಳು ಸಹ ಧ್ವನಿ ಎತ್ತಲಿವೆ” ಎಂದು ಹೇಳಿದರು.

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಕಳೆದ ವಾರ ಬಂಧಿಸಿದೆ. 2021-22ರ ಪ್ರಕರಣ ಇದಾಗಿದ್ದು ದೆಹಲಿ ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುವಾಗ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಮಾಡಿದೆ ಎಂಬ ಆರೋಪಿಸಲಾಗಿದೆ. ನಂತರ ಈ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣದ ಸಾಕ್ಷಿಗೂ ಬಿಜೆಪಿಗೂ ಸಂಬಂಧವಿದೆ: ಎಎಪಿ

ಇನ್ನು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಮಹಾ ರ್‍ಯಾಲಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿಯ ಶರದ್ ಪವಾರ್, ಶಿವಸೇನೆಯ ಉದ್ಧವ್ ಠಾಕ್ರೆ, ಎಸ್‌ಪಿಯ ಅಖಿಲೇಶ್ ಯಾದವ್ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಭಾರತದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ, ಇದು ಅವರಿಗೂ ತಿಳಿದಿದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಮೋದಿ ಕಿ ಗ್ಯಾರಂಟಿಯ ನಡುವೆ ಅಗಾಧ ವ್ಯತ್ಯಾಸವಿದೆ...

ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು...

ವಿವಿಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹೆಚ್ಚು ಅಂಕ

ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ...

ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು...