ಅಪಘಾತ | ವಾಹನ ಚಾಲನೆ ವೇಳೆ ಮೊಬೈಲ್ ಬಳಕೆಯಿಂದ 3,000 ಮಂದಿ; ಹೆಲ್ಮೆಟ್ ಧರಿಸದೆ 50,000 ಮಂದಿ ಸಾವು

Date:

ದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. 2021ಕ್ಕೆ ಹೋಲಿಸಿದರೆ 2022ರಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಪೈಕಿ, ವಾಹನ ಚಾಲನೆ ವೇಳೆ ಮೊಬೈಲ್‌ ಬಳಕೆಯಿಂದಾಗಿ 7,558 ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ 6,255 ಮಂದಿ ಗಾಯಗೊಂಡಿದ್ದು, 3,395 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯ ತಿಳಿಸಿದೆ.

2022ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಕುರಿತು ಸಚಿವಾಲಯವು ವರದಿ ಸಿದ್ದಪಡಿಸಿದೆ. ಅದರ ಪ್ರಕಾರ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆಯಿಂದ ಸಂಭವಿಸಿದ ಅಪಘಾತಗಳ ಸಂಖ್ಯೆ 2021ಕ್ಕಿಂತ 2022ರಲ್ಲಿ ಹೆಚ್ಚಾಗಿವೆ. 2021ರಲ್ಲಿ ಮೊಬೈಲ್ ಬಳಕೆಯಿಂದ 6,530 ಅಪಘಾತಗಳು ಸಂಭವಿಸಿದ್ದವು. 2,982 ಮಂದಿ ಸಾವನ್ನಪ್ಪಿದ್ದರು. ಕಳೆದ ವರ್ಷ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.

ಇನ್ನು, ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡಿದ್ದರಿಂದಾಗಿ ಸಂಭವಿಸಿದ ಅಘಾತಗಳಲ್ಲಿ 50,029 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ 35,692 ಮಂದಿ ವಾಹನ ಸವಾರರಾಗಿದ್ದರೆ, 14,337 ಮಂದಿ ಹಿಂಬದಿ ಸವಾರರಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮದ್ಯಸೇವನೆ ಮಾಡಿ ವಾಹನ ಚಾಲನೆ ಮಾಡಿದ್ದರಿಂದ 10,080 ಅಪಘಾತಗಳಾಗಿದ್ದು, 4201 ಮಂದಿ ಸಾವನ್ನಪ್ಪಿದ್ದಾರೆ. ಸೀಟ್‌ ಬೆಲ್ಟ್ ಧರಿಸದ ಕಾರಣ 16,715 ಮಂದಿ ಸಾವನ್ನಪ್ಪಿದ್ದಾರೆ.

2022ರಲ್ಲಿ ದೇಶದಲ್ಲಿ ಒಟ್ಟು 4,61,312 ರಸ್ತೆ ಅಪಘಾತಗಳ ಸಂಭವಿಸಿವೆ. 1,68,491 ಮಂದಿ ಸಾವನ್ನಪ್ಪಿದ್ದಾರೆ. 4,43,366 ಮಂದಿ ಗಾಯಗೊಂಡಿದ್ದಾರೆ. ಹೀಗಾಗಿ, ರಸ್ತೆ ಅಪಘಾತಗಳ ಸಂಖ್ಯೆ 12%ರಷ್ಟು ಏರಿಕೆಯಾಗಿದೆ. ದೇಶದಲ್ಲಿ ಪ್ರತಿ ಗಂಟೆಗೆ 53 ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಪ್ರತಿ ಗಂಟೆಗೆ 19 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವರದಿ ಹೇಳಿದೆ.

ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 39,762 ರಸ್ತೆ ಅಪಘಾತಗಳು ಸಂಭವಿಸಿದ್ದು, 11,702 ಮಂದಿ ಮೃತಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್: ರಾಮಚಂದ್ರ ಗುಹಾ

ಪ್ರಧಾನಿ ನರೇಂದ್ರ ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್...

ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

ಸರಿಸುಮಾರು ಮುನ್ನೂರು ಕೋಟಿಗೂ ಸಕ್ರಿಯ ಬಳಕೆದಾರರನ್ನು ಹೊಂದಿರುವ ಪ್ರಬಲ ಸಾಮಾಜಿಕ ಮಾಧ್ಯಮ...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

ಚುನಾವಣೆ ನಡೆಯಬೇಕಾದದ್ದು ನಿಜವಾಗಿಯೂ ಜನರ ನೈಜ ಸಮಸ್ಯೆಗಳ ಮೇಲೆ ಅಲ್ಲವೇ? ಇನ್ನೂ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...