ಸುಧಾಮೂರ್ತಿ ಅವರ ಆಸ್ತಿ ಜಗದಗಲ—ತಿಳಿವಳಿಕೆ ಚಮಚದಗಲ: ನಟ ಚೇತನ್‌ ಅಹಿಂಸಾ ಟೀಕೆ

Date:

  • ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದ ಬಿಲ್ಡಪ್‌ನಿಂದ ಗೌರವಿಸಲ್ಪಟ್ಟ ವ್ಯಕ್ತಿ
  • ಸಸ್ಯಾಹಾರ-ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಹೇಳಿಕೆಗೆ ಟೀಕೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಸಸ್ಯಾಹಾರ ಹಾಗೂ ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಬಳಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದನ್ನು ನಟ ಚೇತನ್‌ ಅಹಿಂಸಾ ಅವರು ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಸುಧಾಮೂರ್ತಿಯವರು ನಮ್ಮ ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ” ಎಂದು ಟೀಕೆ ಮಾಡಿದ್ದಾರೆ.

ಮುಂದುವರಿದು, “ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾಮೂರ್ತಿಯವರು ಹೆಚ್ಚು ಮಾತನಾಡಬೇಕು; ಅವರ ಆಸ್ತಿ ಜಗದಗಲ —ತಿಳಿವಳಿಕೆ ಚಮಚದಗಲ!” ಎಂದು ಲೇವಡಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಚೇತನ್‌ ಅಹಿಂಸಾ

ಏನಿದು ಪ್ರಕರಣ?

ಸುಧಾಮೂರ್ತಿ ಅವರು ಇತ್ತೀಚೆಗೆ ‘ಖಾನೆ ಮೇ ಕ್ಯಾ ಹೈ’ ಯೂಟ್ಯೂಬ್ ಚಾನೆಲ್‌ನ ‘ಖಾನೆ ಮೇ ಕೌನ್ ಹೇ’ ಎಂಬ ಸಂಚಿಕೆಯಲ್ಲಿ ಕಾಣಿಸಿಕೊಂಡಿದ್ದರು. ಆ ವೇಳೆ ತಮ್ಮ ಆಹಾರ ಕ್ರಮದ ರೀತಿ, ನೀತಿಗಳ ಬಗ್ಗೆ ಮಾತನಾಡಿದ್ದರು.

“ಹೋಟೆಲ್‌ಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಭಕ್ಷ್ಯಗಳಿಗೆ ಒಂದೇ ಚಮಚ ಬಳಸುವ ಬಗ್ಗೆ ನನ್ನ ಮನಸ್ಸಿಗೆ ತುಂಬಾ ಆತಂಕವಾಗುತ್ತದೆ. ನಾನೊಬ್ಬಳು ಶುದ್ಧ ಸಸ್ಯಾಹಾರಿ. ಮೊಟ್ಟೆ ಸಹಿತ ಯಾವುದೇ ಮಾಂಸಾಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ವಿದೇಶಕ್ಕೆ ಹೋದರೂ ಕೂಡ ಸಸ್ಯಾಹಾರಿ ರೆಸ್ಟೋರೆಂಟ್‌ಗಳನ್ನೇ ಹುಡುಕುತ್ತೇನೆ. ಮನೆ ಊಟವನ್ನು ಹೆಚ್ಚಾಗಿ ಇಷ್ಟಪಡುವೆ. ಪ್ರಯಾಣ ಮಾಡುವಾಗ ಮನೆಯಲ್ಲೇ ತಯಾರಿಸಿದ ಆಹಾರ ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದರು.

ಸುಧಾಮೂರ್ತಿ ಅವರ ಈ ಹೇಳಿಕೆ ಮಾಧ್ಯಮಗಳಲ್ಲಿ ಪ್ರಕಟವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಚಾರವಾಗಿ ನಟ ಚೇತನ್‌ ಅಹಿಂಸಾ ಅವರು ನೇರವಾಗಿ ಸುಧಾಮೂರ್ತಿ ಅವರನ್ನು ಟ್ವೀಟ್‌ ಮೂಲಕ ಟೀಕಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...

ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

"ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಕೊಲೆ...

ಮುಸ್ಲಿಂ ಮೀಸಲಾತಿ ಕುರಿತ ಮೋದಿ ಹೇಳಿಕೆ ಅವರ ಸೋಲಿನ ಭೀತಿ, ಹತಾಶೆಯ ಪ್ರತೀಕ: ಸಿ ಎಂ ಸಿದ್ದರಾಮಯ್ಯ ತಿರುಗೇಟು

"ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್...

ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್,...