ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು; ರಾಜ್ಯದ ಬೊಕ್ಕಸ ದುರ್ಬಳಕೆ: ಆರ್‌ ಅಶೋಕ ಕಿಡಿ

Date:

  • ‘ರಾಜ್ಯದ ಬೊಕ್ಕಸ ಬರಿದು ಮಾಡಿ, ಹೆಮ್ಮಾರಿಯಾದ ಕಾಂಗ್ರೆಸ್ ಸರ್ಕಾರ’
  • ‘ಅಭಿವೃದ್ಧಿಗೆ ಹಣವಿಲ್ಲದೆ ಜನರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಿದೆ’

ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಪೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ.

ಈ ಕುರಿತು ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಒಂದು ಕಡೆ ರಾಜ್ಯದ ಅಭಿವೃದ್ಧಿಗೆ ಹಣವಿಲ್ಲದೆ ಜನರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ತೆಲಂಗಾಣ ರಾಜ್ಯದ ದಿನಪತ್ರಿಕೆಗಳಲ್ಲಿ ಜಾಹೀರಾತು ಕೊಡಲು ರಾಜ್ಯದ ಬೊಕ್ಕಸ ದುರ್ಬಳಕೆ ಮಾಡಿಕೊಂಡು ಚುನಾವಣಾ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿದೆ” ಎಂದಿದ್ದಾರೆ.

“ಗ್ಯಾರಂಟಿಗಳನ್ನು ಜಾರಿ ಮಾಡಲಾಗದೆ ದಿನಕ್ಕೊಂದು ಕುಂಟು ನೆಪ, ನೂರೆಂಟು ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ ಮಾಡಿರುವ ಕಾಂಗ್ರೆಸ್ ಪಕ್ಷ, ಎಲ್ಲಾ 5 ಗ್ಯಾರೆಂಟಿಗಳನ್ನೂ ಚಾಚೂ ತಪ್ಪದೆ ಜಾರಿ ಮಾಡಿಬಿಟ್ಟಿದ್ದೇವೆ ಎಂದು ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಜಾಹೀರಾತು ನೀಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದೆ” ಎಂದು ಹರಿಹಾಯ್ದಿದ್ದಾರೆ.‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕೈಬಿಟ್ಟ 1,412 ವಾಹನಗಳ ಪೈಕಿ 918 ವಾಹನಗಳ ವಿಲೇವಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ಪೊಲೀಸ್ ಠಾಣೆಗಳಲ್ಲಿ ರಚಿಸಲಾದ ವಿಶೇಷ ತಂಡಗಳು...

ಭ್ರಷ್ಟ ಸುಧಾಕರ್ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ: ಸಿಎಂ ಸಿದ್ದರಾಮಯ್ಯ

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ...

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ; ‘ಏನೇನೋ ಅಂದ್ಕೊಬೇಡಿ’ ಎಂದ ನಟ ದರ್ಶನ್

ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ...

ಕರಾವಳಿಯಲ್ಲಿ ಹೊಸ ಸಂಚಲನ; ಕೋಮುವಾದದ ವಿರುದ್ಧ ಬ್ರಾಹ್ಮಣ ಸಮುದಾಯ

ಬ್ರಾಹ್ಮಣರೆಲ್ಲರೂ ಬಿಜೆಪಿಗರು ಮತ್ತು ಕೋಮುವಾದಿಗಳು ಎಂಬ ಹಣೆಪಟ್ಟಿಯ ವಿರುದ್ದ ಮುಖಂಡರು ಸಂದೇಶ...