ಟಿ20| ಪಾಕಿಸ್ತಾನ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ ಅಫ್ಘಾನಿಸ್ಥಾನ

Date:

ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅಫ್ಘಾನಿಸ್ಥಾನ ತಂಡ, ಬಲಿಷ್ಠ ಪಾಕಿಸ್ತಾನದ ವಿರುದ್ಧ ಚೊಚ್ಚಲ ಗೆಲುವು ಸಾಧಿಸಿದೆ. ಶಾರ್ಜಾ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅಪ್ಘಾನ್‌ ಪಡೆ 6 ವಿಕೆಟ್‌ಗಳ ಅಂತರದಲ್ಲಿ ಪಾಕಿಸ್ತಾನವನ್ನು ಮಣಿಸಿತು.

ಟಾಸ್‌ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟ್‌ ಮಾಡಲು ನಿರ್ಧರಿಸಿತ್ತು. ಆದರೆ ಅಫ್ಘಾನಿಸ್ತಾನದ ಬಿಗು ಬೌಲಿಂಗ್‌ ದಾಳಿ ಎದುರು ರನ್‌ ಗಳಿಸಲು ಪರದಾಡದ ಶಾದಾಬ್‌ ಖಾನ್‌ ಪಡೆ. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟದಲ್ಲಿ ಕೇವಲ 92 ರನ್‌ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿಯನ್ನು 17.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ ಬೆನ್ನತ್ತಿದ ಅಫ್ಘಾನಿಸ್ತಾನ, ಪಾಕ್‌ ವಿರುದ್ಧ ಮೊದಲ ಗೆಲುವಿನ ಸಂಭ್ರವನ್ನಾಚರಿಸಿತು. ಲಾಂಗ್‌ ಆಫ್‌ ಕಡೆಗೆ ಭರ್ಜರಿ ಸಿಕ್ಸರ್‌ ಬಾರಿಸುವ ಮೂಲಕ ಮುಹಮ್ಮದ್‌ ನಬಿ ಗೆಲುವಿನ ಗಡಿ ದಾಟಿಸಿದರು.

ನಾಯಕ ಬಾಬರ್‌ ಅಝಂ ಸೇರಿದಂತೆ ಐವರು ಪ್ರಮುಖ ಆಟಗಾರರಿಗೆ ಸರಣಿಯ ಮೊದಲ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿತ್ತು. ಇದರ ಭರಪೂರ ಲಾಭ ಪಡೆದ ರಶೀದ್‌ ಖಾನ್‌ ಬಳಗ ಹೊಸ ಇತಿಹಾಸ ರಚಿಸಿತು.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಾಕ್‌ ಪರ   18 ರನ್‌ಗಳಿಸಿದ ಇಮಾದ್‌ ವಾಸಿಂ ಟಾಪ್‌ ಸ್ಕೋರರ್‌ ಎನಿಸಿಕೊಂಡರು. ಉಳಿದಂತೆ ಆರಂಭಿಕ ಸಾಯಿಮ್‌ ಅಯ್ಯೂಬ್‌ 17, ತಯ್ಯಬ್‌ ತಾಹಿರ್‌ 16 ಹಾಗೂ ನಾಯಕ ಶಾದಾಬ್‌ ಖಾನ್‌ 12 ರನ್‌ಗಳಿಸಿದರು. ಅಪ್ಘಾನ್‌ ಪರ 6 ಬೌಲರ್‌ಗಳು 9 ವಿಕೆಟ್‌ಗಳನ್ನು ಹಂಚಿಕೊಂಡರು

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...