ತಮಿಳುನಾಡು ರಾಜ್ಯಪಾಲರ ಏಕಪಕ್ಷೀಯ ಸಚಿವರ ವಜಾ ನಿರ್ಧಾರ; ಅಮಿತ್‌ ಶಾ ಸಲಹೆ ಮೇರೆಗೆ ಆದೇಶಕ್ಕೆ ತಡೆ

Date:

ಭ್ರಷ್ಟಾಚಾರ ಆರೋಪಗಳಿಗೆ ಬಂಧನಕ್ಕೆ ಒಳಗಾಗಿರುವ ತಮಿಳುನಾಡು ಸಚಿವ ಸೇಂಥಿಲ್‌ ಬಾಲಾಜಿ ಅವರನ್ನು ವಜಾಗೊಳಿಸಿದ ವಿವಾದಾತ್ಮಕ ಆದೇಶವನ್ನು ರಾಜ್ಯಪಾಲ ಆರ್‌ ಎನ್‌ ರವಿ ಕೆಲವೇ ಗಂಟೆಗಳಲ್ಲೇ ಹಿಂಪಡೆದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಕಾನೂನು ಹೋರಾಟದ ಸುಳಿವು ನೀಡಿದ ಹಿನ್ನೆಲೆಯಲ್ಲಿ ಈ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಆದೇಶಕ್ಕೆ ತಡೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಲಹೆಯೂ ಕಾರಣ ಎನ್ನಲಾಗಿದೆ.

ಹಲವಾರು ಗಂಭೀರ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ವಿ ಸೆಂಥಿಲ್ ಬಾಲಾಜಿ ಸಂಪುಟದಲ್ಲಿ ಇರಲು ಅರ್ಹರಲ್ಲ ಎನ್ನುವ ಕಾರಣ ನೀಡಿ ರಾಜ್ಯಪಾಲ ಆರ್‌ ಎನ್‌ ರವಿ ಅವರು ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ವಜಾ ಆದೇಶ ಜಾರಿಗೊಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಲಹೆಯ ಮೇರೆಗೆ ರಾಜ್ಯಪಾಲರು ತಡರಾತ್ರಿ ಈ ವಿಷಯದ ಬಗ್ಗೆ ಅಟಾರ್ನಿ ಜನರಲ್ ಅವರೊಂದಿಗೆ ಸಮಾಲೋಚಿಸುತ್ತಿದ್ದಾರೆ ಹಾಗೂ ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ರಾಜ್ಯಪಾಲರ ಕಚೇರಿಯ ಮೂಲಗಳು ತಿಳಿಸಿವೆ. ಬಾಲಾಜಿ ಸದ್ಯಕ್ಕೆ ಸಚಿವರಾಗಿ ಉಳಿಯುತ್ತಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಆದೇಶ ತಾತ್ಕಾಲಿಕವಾಗಿದ್ದು ಯಾವುದೇ ಸಮಯದಲ್ಲಾದರೂ ಮರು ಜಾರಿಯಾಗಬಹುದು ಎಂದು ಕೂಡ ಮಾಧ್ಯಮಗಳಲ್ಲಿ ವರದಿಯಾಗಿವೆ.

ಈ ಸುದ್ದಿ ಓದಿದ್ದೀರಾ? ಸಿಎಂ ಸಂಪರ್ಕಿಸದೆ ಬಂಧಿತ ಸಚಿವರನ್ನು ವಜಾ ಮಾಡಿದ ತಮಿಳುನಾಡು ರಾಜ್ಯಪಾಲ

ಸಚಿವರ ವಜಾ ಕುರಿತು ಅಟಾರ್ನಿ ಜನರಲ್‌ ಅವರಿಂದ ಕಾನೂನು ಅಭಿಪ್ರಾಯವನ್ನು ಆಲಿಸುತ್ತೇನೆ. ಅವರ ಅಭಿಪ್ರಾಯ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರೊಬ್ಬರು ಸಚಿವರನ್ನು ವಜಾಗೊಳಿಸಿದ ಉದಾಹರಣೆ ಇದ್ದರೂ ಆ ಆದೇಶವನ್ನು ತಡೆ ಹಿಡಿದು ಕಾನೂನು ಸಲಹೆ ಪಡೆಯಲು ಮುಂದಾಗಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್‌ 14ರಂದು ಉದ್ಯೋಗಕ್ಕಾಗಿ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದರು. ಪ್ರಸ್ತುತ ಜೈಲು ಸೇರಿರುವ ಮತ್ತು ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಬಾಲಾಜಿ ಅವರನ್ನು ಸ್ಟಾಲಿನ್ ಅವರು ಖಾತೆರಹಿತ ಸಚಿವರಾಗಿ ಉಳಿಸಿಕೊಂಡಿದ್ದರು. 

ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಬಂಧವು ಹಲವು ತಿಂಗಳುಗಳಿಂದ ಉದ್ವಿಗ್ನಗೊಂಡಿದೆ. ಸರ್ಕಾರದ ಹಲವಾರು ವಿಷಯಗಳ ಬಗ್ಗೆ ರಾಜ್ಯಪಾಲರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ, ರಾಜ್ಯ ವಿಧಾನಸಭೆಯು ಅಂಗೀಕರಿಸಿದ ಶಾಸನಕ್ಕೆ ರಾಜ್ಯಪಾಲರು ಒಪ್ಪಿಗೆ ನಿರಾಕರಿಸಿದರು. ರಾಜ್ಯಪಾಲರ ನಿರ್ಧಾರದ ಬಗ್ಗೆ ಡಿಎಂಕೆ ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ಸಲ್ಲಿಸಿತ್ತು.

ಪಶ್ಚಿಮ ಬಂಗಾಳ, ತೆಲಂಗಾಣ, ಕೇರಳ, ನವದೆಹಲಿ ಸೇರಿದಂತೆ ಪ್ರತಿಪಕ್ಷಗಳು ಆಳ್ವಿಕೆ ನಡೆಸುವ ಇತರ ರಾಜ್ಯಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ, ರಾಜ್ಯಪಾಲರು ಅಥವಾ ಲೆಫ್ಟಿನೆಂಟ್ ಗವರ್ನರ್‌ಗಳು ಪಕ್ಷಪಾತದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಆಡಳಿತ ಪಕ್ಷಗಳು ಆರೋಪಿಸಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...