ಆರೋಗ್ಯದಲ್ಲಿ ದಿಢೀರ್ ಏರುಪೇರು: ಬಿಗ್‌ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

Date:

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, 81 ವರ್ಷದ ಈ ನಟನಿಗೆ ಇಂದು ಉಸಿರಾಟದಲ್ಲಿ ಸಮಸ್ಯೆ ಉಂಟಾಗಿತ್ತು. ಕೂಡಲೇ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು, ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರ ಕುಟುಂಬದ ವೈದ್ಯರು ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತಾಭ್ ಬಚ್ಚನ್ ಅವರಿಗೆ ವಯೋಸಹಜವಾಗಿ ಇತ್ತೀಚಿನ ಕೆಲ ಸಮಯದಿಂದ ಪದೇ ಪದೇ ಅನಾರೋಗ್ಯ ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಮಿತಾಭ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗುವ ಒಂದು ಗಂಟೆ ಮೊದಲು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ T4950(ಟ್ವೀಟ್‌ ಸಂಖ್ಯೆ ಇದು) ‘ಎಂದೆಂದಿಗೂ ಕೃತಜ್ಞತೆಯಲ್ಲಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ನಾಳೆ ವೇಳಾಪಟ್ಟಿ ಪ್ರಕಟಿಸಲಿರುವ ಚುನಾವಣಾ ಆಯೋಗ

ಅಮಿತಾಭ್ ಬಚ್ಚನ್ ಸದ್ಯ ಪ್ರಭಾಸ್‌ ಅಭಿನಯಿಸುತ್ತಿರುವ 2989 AD ಕಲ್ಕಿ ಚಿತ್ರದ ಭಾಗವಾಗಿದ್ದಾರೆ.. ಮೊನ್ನೆಯಷ್ಟೇ ಈ ಚಿತ್ರದ ಅಪ್‌ಡೇಟ್‌ವೊಂದನ್ನು ಹಂಚಿಕೊಂಡಿದ್ದು, “ನಿನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದಿದ್ದೇನೆ. ಚಿತ್ರದ ಚಿತ್ರೀಕರಣ ಎಲ್ಲವೂ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ತೆರೆ ಕಾಣಲಿದೆ” ಎಂದು ಮಾಹಿತಿಯನ್ನು ಹಂಚಿಕೊಂಡಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣ: ರೀಲ್ಸ್‌ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ಜಾಮೀನು

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಬಿಗ್...

ಪ್ರಕಾಶ್ ರಾಜ್ ಬಿಜೆಪಿ ಸೇರ್ಪಡೆ ವದಂತಿ: ಬಹುಭಾಷಾ ನಟ ಹೇಳಿದ್ದೇನು?

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಮುಖಂಡರು ಆ ಪಕ್ಷದಿಂದ ಈ ಪಕ್ಷಕ್ಕೆ...

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು...

‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್...