ಅನಂತಕುಮಾರ್‌ ಹೆಗಡೆ ಹುಚ್ಚ, ವಿಜಯೇಂದ್ರ ಹುಚ್ಚಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಿ: ಸಚಿವ ಶಿವರಾಜ್ ತಂಗಡಗಿ

Date:

ಹುಚ್ಚನಂತೆ ಆಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆಗೆ ಅವರ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಚಿಕಿತ್ಸೆ ಕೊಡಿಸಲಿ, ಆಗಲ್ಲ ಅಂದ್ರೆ ನಾವು ಕೊಡಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹರಿಹಾಯ್ದರು.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಅನಂತಕುಮಾರ್‌ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಆತ ಬಿಜೆಪಿಯೊಳಗಿರುವ ಹುಚ್ಚ, ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸುವ ಕೆಲಸ ಮೊದಲು ಮಾಡಿ” ಎಂದು ವಾಗ್ದಾಳಿ ನಡೆಸಿದರು.

”ಅನಂತಕುಮಾರ್ ಹೆಗಡೆ ಒಬ್ಬ ಹುಚ್ಚ ಎಂಬುದನ್ನು ಬಿಜೆಪಿಯವರೇ ಅರ್ಥಮಾಡಿಕೊಂಡಂತಿದೆ. ಬಿಜೆಪಿ ರಾಜ್ಯಾಧ್ಯಕ್ಷರೇ ಅವರ ಮಾತಿಗೆ ನಾವು ಬೆಲೆ ಕೊಡಲ್ಲ ಅಂದ್ರೆ ಅದರ ಅರ್ಥ, ಅವನು ಹುಚ್ಚ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

ಕಾಂತರಾಜ ವರದಿ ಬಗ್ಗೆ ಪ್ರತಿಕ್ರಿಯಿಸಿ, “ಕಾಂತರಾಜ ರಿಪೋರ್ಟ್ ಸ್ವೀಕಾರ ಮಾಡಲು ಸರ್ಕಾರ ಸಿದ್ಧವಿದೆ.‌ ಜನವರಿ 31ರ ಒಳಗೆ ಕಾಂತರಾಜ ರಿಪೋರ್ಟ್ ತೆಗೆದುಕೊಳ್ಳುತ್ತೇವೆ. ರಿಪೋರ್ಟ್ ಕೊಡಲು ಸೂಚಿಸಿದ್ದೇವೆ. ಆಯೋಗದ ಅವಧಿ ಜನವರಿ 31ವರೆಗೂ ಇದೆ. ಅದರ ಒಳಗೆ ವರದಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ” ಎಂದು ವಿವರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ...

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...