- ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ
- ಮಹಿಳೆಯನ್ನು ಕಾಲಿನಿಂದ ತುಳಿದು ಕೊಲೆ ಮಾಡಿದ ಒಂಟಿಸಲಗ
ಕುರಿ ಕಾಯುತ್ತಿದ್ದ ಮಹಿಳೆ ಕಾಡಾನೆ ದಾಳಿಯಿಂದ ದುರ್ಮರಣ ಹೊಂದಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿ ಬಳಿ ಈ ಘಟನೆ ನಡೆದಿದೆ.
ನಾಗಮ್ಮ ಸಾವನ್ನಪ್ಪಿದ ಮಹಿಳೆ ಇವರಿಗೆ 48 ವರ್ಷ ವಯಸ್ಸಾಗಿತ್ತು. ಕಾಲಿನಿಂದ ಮಹಿಳೆಯನ್ನು ತುಳಿದು ಒಂಟಿಸಲಗ ಕೊಲೆ ಮಾಡಿದೆ.
ಈ ಪ್ರದೇಶದಲ್ಲಿ ಪದೇಪದೆ ಜನರ ಮೇಲೆ ಕಾಡಾನೆ ದಾಳಿ ಮಾಡುತ್ತಿದೆ. ಇದರಿಂದ ಜನರು ಭಯಭೀತಗೊಂಡಿದ್ದರು. ಕಾಡಾನೆಯನ್ನು ಸೆರೆಹಿಡಿಯುವಂತೆ ಅರಣ್ಯ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ದರು ಪ್ರಯೋಜನವಾಗಿರಲಿಲ್ಲ. ಇಷ್ಟು ಮನವಿ ಮಾಡಿ ಹೇಳಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.