ರಾಯಚೂರು | ಪೌಷ್ಠಿಕ ಆಹಾರ ಸೇವನೆಯಿಂದ ಮಾತ್ರ ರಕ್ತಹೀನತೆ ತಡೆ: ಜಿಲ್ಲಾಧಿಕಾರಿ

Date:

ರಕ್ತಹೀನತೆ ಸಮಸ್ಯೆ ಹೆಚ್ಚಾಗಿ ಮಹಿಳೆಯರಲ್ಲಿ ಕಂಡುಬರುತ್ತದೆ. ಮಹಿಳೆಯರು ಹೆಚ್ಚಾಗಿ ಹಸಿ ತರಕಾರಿ, ಹಣ್ಣು ಹಾಗೂ ಪೌಷ್ಟಿಕಾಂಶಯುಕ್ತ ಆಹಾರ ಸೇವೆನೆ ಮಾಡಬೇಕು. ಆ ಮೂಲಕ ರಕ್ತಹೀನತೆಯನ್ನು ತಡೆಗಟ್ಟಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ ಹೇಳಿದ್ದಾರೆ.

ರಾಯಚೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ‘ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ’ ಕಾರ್ಯಕ್ರಮದಲ್ಲಿ ಮಾತನಾಡಿದರು. “ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗಾಗಿ ಸರ್ಕಾರ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯನ್ನು ಅನುಷ್ಟಾನಗೊಳಿಸಿದೆ” ಎಂದು ತಿಳಿಸಿದರು.

ಇಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕರಾಂ ಪಾಂಡ್ವೆ ಮಾತನಾಡಿ, “ಹಿಮೊಗ್ಲೊಬಿನ್ ಕೊರತೆಯಿಂದ ಅನೀಮಿಯಾ ಕಂಡುಬರುತ್ತಿದೆ. ಅಂತಹವರು  ಸರಿಯಾದ ಚಿಕಿತ್ಸೆ ಮತ್ತು ಔಷಧಿಗಳನ್ನು ತೆಗೆದುಕೊಳ್ಳಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಿಮೊಗ್ಲೊಬಿನ್ ಕೊರತೆಯಿಂದಾಗಿ ಮಹಿಳೆಯರಲ್ಲಿ ಸುಸ್ತು, ಆಯಾಸ ಕಂಡುಬರುತ್ತದೆ. ಇದರಿಂದ ಯಾವುದೇ ಕೆಲಸ ಮಾಡಲು ಇಚ್ಛಾಶಕ್ತಿ ಕಡಿಮೆಯಾಗುತ್ತದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಸಾಹಿತ್ಯಾ ಆಲದಕಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾರಾದ ಗೋಪಾಲ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕತೆಯರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...