ಜಾತಿಗಣತಿ ವರದಿ ಸ್ವೀಕಾರ ಮಾಡಲು ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

Date:

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿ, ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜ ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರೇಷ್ಮೆ ಭವನ ನಿರ್ಮಾಣಕ್ಕೆ ರಾಜ್ಯ ಗಣಿಗಾರಿಕೆ ಅಭಿವೃದ್ಧಿ ನಿಗಮದ ಹೂಡಿಕೆ; ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸಿಎಂ ಸೂಚನೆ 

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...