ಕೇಜ್ರಿವಾಲ್ ಬಂಧನ | ಸತ್ಯಪಾಲ್ ಮಲಿಕ್ ಭವಿಷ್ಯ ನುಡಿದ ವಿಡಿಯೋ ವೈರಲ್

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಕೇಜ್ರಿವಾಲ್ ಬಂಧನದ ಬಗ್ಗೆ ಭವಿಷ್ಯ ನುಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ “ಚುನಾವಣೆ ಬರುತ್ತಿದ್ದಂತೆ ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗುತ್ತದೆ” ಎಂದು ಬಿಹಾರ, ಜಮ್ಮು ಮತ್ತು ಕಾಶ್ಮೀರ, ಗೋವಾ ಮತ್ತು ಮೇಘಾಲಯ ರಾಜ್ಯಗಳ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿರುವುದು ಕಂಡುಬಂದಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಅದಾದ ಬೆನ್ನಲ್ಲೇ ಸತ್ಯಪಾಲ್ ಮಲಿಕ್ ತನ್ನ ಹಳೆಯ ಸಂದರ್ಶನದ ವಿಡಿಯೋವನ್ನು ರೀಟ್ವೀಟ್ ಮಾಡಿದ್ದಾರೆ. ಜೊತೆಗೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗುವುದು ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ಬಿಬಿಸಿಗೆ ನೀಡಿದ ಈ ಸಂದರ್ಶನದಲ್ಲಿ “ಲೋಕಸಭೆ ಚುನಾವಣೆಗೂ ಮುನ್ನ ಕೇಜ್ರಿವಾಲ್ ಬಂಧನ ಶೇಕಡ 100ರಷ್ಟು ಖಚಿತ” ಎಂದು ಮಲಿಕ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವಿಡಿಯೋವನ್ನು ಎಕ್ಸ್‌ನಲ್ಲಿ (ಟ್ವಿಟ್ಟರ್) ಹಂಚಿಕೊಂಡಿರುವ ಸತ್ಯಪಾಲ್ ಮಲಿಕ್ ಪ್ರಧಾನಿ ನರೇಂದ್ರ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ನಾನು ಹತ್ತು ತಿಂಗಳ ಹಿಂದೆಯೇ ಈ ಮೋದಿ ಸರ್ಕಾರವು ಚುನಾವಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಲಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದೇನೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕರ ಬಂಧನದ ಬಳಿಕ ಬಿಜೆಪಿಗೆ 30 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದ್ದ ಅರಬಿಂದೋ ಫಾರ್ಮಾ

“ಸಿಂಹಾಸನದಲ್ಲಿ ಕುಳಿತಿರುವ ಸರ್ವಾಧಿಕಾರಿ ಹೇಡಿ, ದೇಶದ ಸರ್ಕಾರಿ ಏಜೆನ್ಸಿಗಳ ದುರ್ಬಳಕೆ ಮಾಡುತ್ತಿದ್ದಾರೆ” ಎಂದು ಮೋದಿ ವಿರುದ್ಧ ಕಿಡಿಕಾರಿರುವ ಮಲಿಕ್, “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸುವ ಮೂಲಕ ಇಂದು ಮೋದಿ ಸರ್ಕಾರವು ಶವದ ಪೆಟ್ಟಿಗೆ ಮೇಲೆ ತನ್ನ ಕೊನೆಯ ಮೊಳೆಯನ್ನು ಚುಚ್ಚಿದೆ” ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಬಿಐ ರಾಜ್ಯಪಾಲ ಸತ್ಯಪಾಲ್ ಮಲಿಕ್‌ಗೆ ಸೇರಿದ 30ಕ್ಕೂ ಅಧಿಕ ಸ್ಥಳಗಳಲ್ಲಿ ದಾಳಿ ನಡೆಸಿದೆ. ಕಿರು ಹೈಡ್ರೋ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ ಕಾಮಗಾರಿ ಗುತ್ತಿಗೆ ನೀಡುವಾಗ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಿಬಿಐ ಈ ದಾಳಿಯನ್ನು ನಡೆಸಿದೆ.

ಈ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳ ವಿಲೇವಾರಿಗೆ 300 ಕೋಟಿ ರೂಪಾಯಿ ಲಂಚದ ಆಮಿಷವನ್ನು ತಮಗೆ ಒಡ್ಡಲಾಗಿತ್ತು ಎಂದು 2018ರಿಂದ 2019ರ ಅಕ್ಟೋಬರ್‌ 30ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್‌ ಹೇಳಿದ್ದರು. ಆದರೆ ಈಗ ಅವರ ವಿರುದ್ಧವೇ ಸಿಬಿಐ ತನಿಖೆಯನ್ನು ನಡೆಸುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...