ಕಾಂಗ್ರೆಸ್ ತೊರೆದ ಒಂದು ದಿನದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಿದ್ದಾರೆ.
ಬಿಜೆಪಿ ಸೇರ್ಪಡೆಯ ವೇಳೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವನ್ಕುಲ್ ಸ್ವಾಗತಿಸಿದರು.
ಸಾರ್ವತ್ರಿಕ ಚುನಾವಣೆಗೂ ಮುನ್ನವೇ ಅಶೋಕ್ ಚವಾಣ್ ಕಾಂಗ್ರೆಸ್ ತೊರೆದಿರುವುದು ಪಕ್ಷದ ಕಾರ್ಯಕರ್ತರಿಗೆ ಆಘಾತ ನೀಡಿದೆ. ಅಶೋಕ್ ಚವಾಣ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸೇರ್ಪಡೆಯ ಬೆನ್ನಲ್ಲೇ ರಾಜ್ಯಸಭಾ ಟಿಕೆಟ್ ಕೂಡ ಸಿಗಲಿದೆ ಎಂದು ವರದಿಯಾಗಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
#WATCH | Former Maharashtra CM Ashok Chavan joins the BJP at the party’s office in Mumbai. He recently quit Congress.
Former Congress MLC Amar Rajurkar also joined the BJP. pic.twitter.com/2833wY76am
— ANI (@ANI) February 13, 2024
ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಬಳಿಕ ಮಾತನಾಡಿದ್ದ ಅಶೋಕ್ ಚವಾಣ್, ಇನ್ನೆರಡು ದಿನಗಳಲ್ಲಿ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಇಂದು ಬೆಳಗ್ಗೆ ಬಿಜೆಪಿಯೊಂದಿಗೆ ಹೊಸ ರಾಜಕೀಯ ಪಯಣ ಆರಂಭಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಒಂದೇ ತಿಂಗಳಲ್ಲಿ ಎರಡನೇ ದೊಡ್ಡ ಹೊಡೆತವಾಗಿದೆ. ಈ ಹಿಂದೆ, ಪ್ರಮುಖ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷವನ್ನು ತೊರೆದು ಶಿವಸೇನೆಯ ಏಕನಾಥ್ ಶಿಂಧೆ ಬಣವನ್ನು ಸೇರಿದ್ದರು. ಬಾಬಾ ಸಿದ್ದಿಕ್ ಕೂಡ ತೊರೆದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಕೈ ಜೋಡಿಸಿದ್ದರು.
Ashok Chavan forgot that he left Congress & joined BJP
“Mumbai Congress Adhyaksh..”
Fadnavis started ranting 🤣🤣pic.twitter.com/3vRWzWdxOd— Amock (@Politics_2022_) February 13, 2024
‘ಮುಂಬೈ ಕಾಂಗ್ರೆಸ್ ಅಧ್ಯಕ್ಷರೇ’ ಎಂದ ಚವಾಣ್: ನಗೆಗಡಲಲ್ಲಿ ತೇಲಿದ ಸಭೆ
ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತು ಆರಂಭಿಸುವ ವೇಳೆ ಮುಂಬೈ ನಗರ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್ ಅವರನ್ನು “ಮುಂಬೈ ಕಾಂಗ್ರೆಸ್ ಅಧ್ಯಕ್ಷ” ಎಂದು ತಪ್ಪಾಗಿ ಉಲ್ಲೇಖಿಸಿದ ಪ್ರಸಂಗ ಕೂಡ ನಡೆಯಿತು.
ಅಶೋಕ್ ಚವಾಣ್ ಅವರ ಎಡವಟ್ಟು ಅರಿತ ಕೂಡಲೇ ಪಕ್ಕದಲ್ಲೇ ಕುಳಿತಿದ್ದ ಡಿಸಿಎಂ ದೇವೇಂದ್ರ ಫಡ್ನವೀಸ್ ಬಿಜೆಪಿ ಎಂದು ಸರಿಪಡಿಸಲು ತಿಳಿಸಿದರು. ಈ ಬೆಳವಣಿಗೆ ಅಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, ಮಾಧ್ಯಮದವರನ್ನು ಸೇರಿ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿತು. ಇದರ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.