ಸನಾತನ ಧರ್ಮವನ್ನು ನಿಂದಿಸಿದವರಿಗೆ ಈ ಚುನಾವಣೆಯೇ ನಿದರ್ಶನ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

Date:

ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಬರುತ್ತಿರುವ ಮಧ್ಯೆಯೇ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ‘ಸನಾತನ ಧರ್ಮ’ವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟಿದ್ದಾರೆ.

ಚುನಾವಣಾ ಫಲಿತಾಂಶಗಳು ಬಿಜೆಪಿಯ ಕಡೆಗೆ ವಾಲುತ್ತಿರುವ ನಡುವೆ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ, ಸನಾತನ ಧರ್ಮದ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳುವ ಮೂಲಕ ಬಹಿರಂಗವಾಗಿ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

ತೆಲಂಗಾಣ ಹೊರತುಪಡಿಸಿ ಮೂರು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಚಂಡ ವಿಜಯ ಸಿಕ್ಕ ನಂತರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಕಾರ್ಯಕರ್ತರನ್ನು ವೆಂಕಟೇಶ್ ಪ್ರಸಾದ್ ಅಭಿನಂದಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್‌ನ ಸೋಲಿಗೆ ಅದರ ಮೈತ್ರಿ ಪಾಲುದಾರರು ಕಾರಣ ಎಂದು ಪರೋಕ್ಷವಾಗಿ ತಿಳಿಸಿರುವ ಮಾಜಿ ಕ್ರಿಕೆಟಿಗ, ಮುಂದಾದರೂ ಪಾಠ ಕಲಿಯುವಂತೆ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ಉದಯನಿಧಿ ಸ್ಟಾಲಿನ್ ನೀಡಿದ್ದ ಸನಾತನ ಧರ್ಮ ಕುರಿತ ವಿವಾದಾತ್ಮಕ ಹೇಳಿಕೆಯೇ ಕಾಂಗ್ರೆಸ್‌ ಈ ಹೀನಾಯ ಸಾಧನೆಗೆ ಕಾರಣ ಎಂಬುದನ್ನು ಪರೋಕ್ಷವಾಗಿ ಉಲ್ಲೇಖಿಸಿ ಪೋಸ್ಟ್​ ಮಾಡಿದ್ದಾರೆ.

‘ಸನಾತನ ಧರ್ಮವನ್ನು ದುರುಪಯೋಗ ಪಡಿಸಿಕೊಂಡವರು, ನಿಂದಿಸಿದವರಿಗೆ ಸರಿಯಾದ ಪಾಠ ಆಗಿದೆ. ಯಾರೇ ಆಗಲಿ ಪರಿಣಾಮ ಎದುರಿಸಬೇಕಾಗುತ್ತದೆ. ಸನಾತನ ಧರ್ಮವನ್ನು ದುರುಪಯೋಗಪಡಿಸಿಕೊಂಡರೆ, ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ನಿದರ್ಶನ. ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿಗೆ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ, ಅಮಿತ್ ಶಾ ಅವರ ಅದ್ಭುತ ನಾಯಕತ್ವ ಮತ್ತು ಪಕ್ಷದ ತಳಮಟ್ಟದ ಕಾರ್ಯಕರ್ತರ ಅಮೋಘ ಕಾರ್ಯಕ್ಕೆ ಮತ್ತೊಂದು ಸಾಕ್ಷಿಯಾಗಿದೆ’ ಎಂದು ಪೋಸ್ಟ್​ನಲ್ಲಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬರೆದಿದ್ದಾರೆ.

ತೆಲಂಗಾಣ ಹೊರತುಪಡಿಸಿ ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲಿದೆ. ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಸೋಲನುಭವಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...