15 ದಿನಗಳಲ್ಲಿ 78 ಗಂಟೆಗಳ ಕಾಲ ನಡೆದ ಕಾರ್ಯಕಲಾಪ: ಸ್ಪೀಕರ್‌ ಯು ಟಿ ಖಾದರ್‌ ಮಾಹಿತಿ

Date:

  • ಅಧಿವೇಶನದಲ್ಲಿ ಒಟ್ಟು 14 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ
  • ಆಯವ್ಯಯದ ಸಾಮಾನ್ಯ ಚರ್ಚೆಯಲ್ಲಿ 62 ಸದಸ್ಯರು 12 ಗಂಟೆ 52 ನಿಮಿಷ ಭಾಗಿ

ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನದ ಮುಂದುವರಿದ ಉಪವೇಶನವು ಜು.3 ರಿಂದ 21 ರವರೆಗೆ ಒಟ್ಟು 15 ದಿನಗಳ ಕಾಲ ಸುಮಾರು 78 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯ ಅಧಿವೇಶನವು ಅನಿರ್ದಿಷ್ಟಾವಧಿಗೆ ಮುಂದೂಡಿದ ಬಳಿಕ ಅವರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜುಲೈ 3 ರಂದು ರಾಜ್ಯಪಾಲರು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದಲ್ಲಿ 31 ಸದಸ್ಯರು ಒಟ್ಟು 12 ಗಂಟೆ 39 ನಿಮಿಷಗಳ ಕಾಲ ಭಾಗವಹಿಸಿದ್ದರು. ವಂದನಾ ನಿರ್ಣಯದ ಪ್ರಸ್ತಾವವನ್ನು ಜುಲೈ 13 ರಂದು ಅಂಗೀಕರಿಸಲಾಗಿದೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023-24ನ ಸಾಲಿನ ಆಯವ್ಯಯ ಅಂದಾಜುಗಳನ್ನು ಮುಖ್ಯಮಂತ್ರಿಯವರು ಜು. 7ರಂದು ಮಂಡಿಸಿದರು. ಆಯವ್ಯಯದ ಸಾಮಾನ್ಯ ಚರ್ಚೆಯಲ್ಲಿ 62 ಸದಸ್ಯರು ಒಟ್ಟು 12 ಗಂಟೆ 52 ನಿಮಿಷಗಳ ಕಾಲ ಭಾಗವಹಿಸಿದ್ದರು. ಜು.20 ರಂದು ಮುಖ್ಯಮಂತ್ರಿ ಉತ್ತರ ನೀಡಿದ ನಂತರ ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

ಈ ಅಧಿವೇಶನದಲ್ಲಿ ವಿಧಾನಸಭೆಯ ನೂತನ ಉಪ ಸಭಾಧ್ಯಕ್ಷರನ್ನಾಗಿ ರುದ್ರಪ್ಪ ಲಮಾಣಿ ಇವರನ್ನು ಚುನಾಯಿಸಲಾಗಿದೆ. ಅಲ್ಲದೆ, ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ. ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕ ಪರಿಶೋಧನಾ ವರದಿಯನ್ನು (2023ರ ವರದಿ ಸಂಖ್ಯೆ-2) ಸದನದಲ್ಲಿ ಮಂಡಿಸಲಾಗಿದೆ ಎಂದು ಅವರು ಹೇಳಿದರು.

ಈ ಸದನದಲ್ಲಿ ಆಶಿಸ್ತು ಹಾಗೂ ಅಗೌರವದಿಂದ ವರ್ತಿಸಿದ ಹತ್ತು ಸದಸ್ಯರನ್ನು ಜು.19ರಂದು ಈ ಅಧಿವೇಶನ ಮುಕ್ತಾಯವಾಗುವವರೆಗೆ ಸದನಕ್ಕೆ ಬಾರದಂತೆ ತಡೆಹಿಡಿಯಲಾಗಿದೆ (ಅಮಾನತುಗೊಳಿಸಲಾಗಿದೆ) ಎಂದು ಖಾದರ್ ಮಾಹಿತಿ ನೀಡಿದರು.

2021-22 ಮತ್ತು 2022-23ನೇ ಸಾಲಿನ ಸರ್ಕಾರಿ ಭರವಸೆಗಳ ಸಮಿತಿಯ ಹದಿನೈದನೇ ವರದಿ, ಹದಿನೈದನೇ ವಿಧಾನಸಭೆಯ 2020-21ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಹನ್ನೆರಡನೇ ವಿಶೇಷ ವರದಿಯನ್ನು ಸದನದಲ್ಲಿ ಮಂಡಿಸಲಾಗಿದ್ದು, ಒಟ್ಟು 29 ಅಧಿಸೂಚನೆಗಳು 02 ಅಧ್ಯಾದೇಶಗಳು ಮತ್ತು 70 ವಾರ್ಷಿಕ ವರದಿಗಳು, ಪರಿಶೋಧನಾ ವರದಿಗಳು, 99 ಲೆಕ್ಕ ಪರಿಶೋಧನಾ 04 ಅನುಪಾಲನ 01 ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವೂ ಸೇರಿದಂತೆ ಒಟ್ಟು 14 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. ನಿಯಮ 60 ರಡಿಯಲ್ಲಿ ನೀಡಿದ್ದ 6 ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಒಟ್ಟು 4 ಸೂಚನೆಗಳನ್ನು ನಿಯಮ 69ರ ಅಡಿಯಲ್ಲಿ ಚರ್ಚಿಸಲಾಗಿರುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಭಯ ಸದನಗಳಲ್ಲೂ ಅಂಗೀಕಾರ ಪಡೆದ ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ವಿಧೇಯಕ

ಒಟ್ಟು 1149 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 120 ಪ್ರಶ್ನೆಗಳ ಪೈಕಿ 120 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಲಿಖಿತ ಮೂಲಕ ಉತ್ತರಿಸುವ 1013 ಪ್ರಶ್ನೆಗಳ ಪೈಕಿ 966 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ.
ನಿಯಮ 351 ರಡಿಯಲ್ಲಿ 249 ಸೂಚನೆಗಳ ಪೈಕಿ 153 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನ ಸೆಳೆಯುವ 202 ಸೂಚನೆಗಳ ಪೈಕಿ 181 ಸೂಚನಾ ಪತ್ರಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 16 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದರು.

ವಿಧಾನ ಮಂಡಲದ/ವಿಧಾನ ಸಭೆಯ ವಿವಿಧ ಸಮಿತಿಗಳಿಗೆ, ಕರ್ನಾಟಕ ವಿಧಾನಸಭೆಯ ನಿಯಮಾವಳಿ ಸಮಿತಿಗೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾವಿಷಯಕ ಪರಿಷತ್ತಿಗೆ ಹಾಗೂ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಮಾನ್ಯ ಸದಸ್ಯರುಗಳನ್ನು ನಾಮ ನಿರ್ದೇಶನ ಮಾಡಲು ಸದನವು ಮಾನ್ಯ ಸಭಾಧ್ಯಕ್ಷರಿಗೆ ಅಧಿಕಾರ ನೀಡಿರುತ್ತದೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...