ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್: ನ್ಯೂಝಿಲ್ಯಾಂಡ್‌ಗೆ ಗೆಲುವಿಗೆ 389 ರನ್‌ಗಳ ಗುರಿ

Date:

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ, ಗೆಲ್ಲಲು ನ್ಯೂಝಿಲ್ಯಾಂಡ್ 389 ರನ್‌ಗಳ ಬೃಹತ್ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸೀಸ್, ನಿಗದಿತ 49.2 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 388 ರನ್ ದಾಖಲಿಸಿತು.

ಮೊದಲ ವಿಕೆಟ್‌ಗೆ ಬೃಹತ್ ಜೊತೆಯಾಟ ನಡೆಸಿದ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಜೋಡಿ, 19.1 ಓವರ್‌ಗಳಲ್ಲಿ 175 ರನ್‌ಗಳ ಬೃಹತ್ ಜೊತೆಯಾಟ ನಡೆಸಿದರು. ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡುವ ಮೂಲಕ ಈ ಜೋಡಿಯನ್ನು ಗ್ಲೆನ್ ಫಿಲಿಫ್ಸ್ ಬೇರ್ಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಶ್ವಕಪ್‌ನ ಮೊದಲ ಪಂದ್ಯವನ್ನಾಡುತ್ತಿರುವ ಟ್ರಾವಿಸ್ ಹೆಡ್, ಶತಕ ಬಾರಿಸುವ ಮೂಲಕ ಮಿಂಚಿದರು. 67 ಎಸೆತಗಳನ್ನು ಎದುರಿಸಿದ ಹೆಡ್ 10 ಬೌಂಡರಿಗಳು ಮತ್ತು 7 ಸಿಕ್ಸರ್‌ಗಳೊಂದಿಗೆ 109 ರನ್ ಗಳಿಸಿದರು.

ಬಳಿಕ ಬಂದ ಮ್ಯಾಕ್ಸ್‌ವೆಲ್ 41 ರನ್ (24 ಎಸೆತ). ಇಂಗ್ಲಿಸ್ 38(28 ಎಸೆತ). ಕಮ್ಮಿನ್ಸ್ 37ರನ್ (14 ಎಸೆತ) ರನ್‌ಗಳ ನೆರವಿನಿಂದ ನ್ಯೂಝಿಲ್ಯಾಂಡ್ ವಿರುದ್ಧ ಆಸ್ಟ್ರೇಲಿಯಾ 388 ರನ್‌ಗಳಿಗೆ ಆಲೌಟ್ ಆಯಿತು. 387ಕ್ಕೆ 6 ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾ, 388 ರನ್ ಗಳಿಸುವ ವೇಳೆ ಆಲೌಟ್ ಆಯಿತು.

ನ್ಯೂಝಿಲ್ಯಾಂಡ್ ಪರ ಬೌಲಿಂಗ್‌ನಲ್ಲಿ ಗ್ಲೆನ್ ಫಿಲಿಫ್ಸ್ 37ಕ್ಕೆ 3, ಟ್ರೆಂಟ್ ಬೌಲ್ಟ್ 77ಕ್ಕೆ 3, ಮಿಚೆಲ್ ಸ್ಯಾಂಟನರ್ 80ಕ್ಕೆ 2, ಜಿಮ್ಮಿ ನೀಶಮ್ ಮತ್ತು ಮ್ಯಾಟ್ ಹೆನ್ರಿ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ವಿಶ್ವಕಪ್‌ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ಸೆಮಿಫೈನಲ್‌ಗೇರುವುದೋ ಎಂಬ ಅನುಮಾನವಿತ್ತು. ಆ ಬಳಿಕ ಚೇತರಿಸಿಕೊಂಡ ಕಮ್ಮಿನ್ಸ್ ಪಡೆ, ಸತತ ಮೂರು ಪಂದ್ಯಗಳಲ್ಲಿ 350ಕ್ಕೂ ಹೆಚ್ಚು ರನ್ ಗಳಿಸಿ, ಗೆಲ್ಲುವ ಮೂಲಕ ದಾಖಲೆ ನಿರ್ಮಿಸಿದೆ.

ಸದ್ಯದವರೆಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ನ್ಯೂಝಿಲ್ಯಾಂಡ್ ಐದು ಪಂದ್ಯಗಳಲ್ಲಿ 4 ಗೆಲುವು, 1 ಸೋಲಿನೊಂದಿಗೆ 8 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಐದು ಪಂದ್ಯಗಳಲ್ಲಿ 3 ಗೆಲುವು, 2 ಸೋಲಿನೊಂದಿಗೆ 6 ಅಂಕದೊಂದಿಗೆ ನಾಲ್ಕನೇಯ ಸ್ಥಾನದಲ್ಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...