ಅಧಿಕಾರಕ್ಕೆ ವಯಸ್ಸಾಗಿತ್ತೇ, ಪ್ರತಿಭಟನೆಗೆ ಹರೆಯವೇ: ಬಿಎಸ್‌ವೈ ಬಳಕೆ ಕುರಿತು ಬಿಜೆಪಿ ಲೇವಡಿ ಮಾಡಿದ ಕಾಂಗ್ರೆಸ್‌

Date:

ಬೇಕಾದಾಗ ಬಳಸಿಕೊಂಡು ಬೇಡವಾದಾಗ ಬಿಸಾಡುವುದಕ್ಕೆ ಬಿಎಸ್‌ವೈ ಅವರನ್ನು ಟಿಶ್ಯು ಪೇಪರ್ ಎಂದುಕೊಂಡಿದೆಯೇ ಬಿಜೆಪಿ? ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬಿಜೆಪಿ ಪ್ರತಿಭಟನೆ ನಡೆಸಿತು. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

“ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಪದಚ್ಯುತಿಗೊಳಿಸಿ, ನಂತರ ವಯಸ್ಸಿನ ಕಾರಣ ನೀಡಿದ ಬಿಜೆಪಿ ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರೀಡಂ ಪಾರ್ಕಿನಲ್ಲಿ, ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು. ಅಧಿಕಾರ ನಡೆಸಲು ಮಾತ್ರ ಅವರಿಗೆ ವಯಸ್ಸಾಗಿತ್ತೇ, ಈಗ ಅವರಿಗೆ ಹದಿನೆಂಟರ ಹರೆಯವೇ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಒಬ್ಬ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ರಾಜಕೀಯದಿಂದ ದೂರ ತಳ್ಳಿದ್ದ ಬಿ ಎಸ್‌ ಯಡಿಯೂರಪ್ಪ ಅವರನ್ನೇ ಮತ್ತೆ ಆಶ್ರಯಿಸಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ. ಅಗತ್ಯವಿದ್ದಾಗ ಕಾಲು ಹಿಡಿಯುವುದು, ಅಗತ್ಯವಿಲ್ಲದಾಗ ಕಾಲು ಎಳೆಯುವುದು ಬಿಜೆಪಿ ಸಂಸ್ಕೃತಿ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಸುದ್ದಿ ಓದಿದ್ದೀರಾ? ನಾವಿಕನಿಲ್ಲದ ದೋಣಿಯಂತಿರುವ ಬಿಜೆಪಿಯವರ ವರ್ತನೆ ಸದನ ಯೋಗ್ಯವಲ್ಲ: ಪ್ರಿಯಾಂಕ್‌ ಖರ್ಗೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಪರಿಶಿಷ್ಟರಿಗೆ ಬೇಡವಾದ ಬಿಜೆಪಿ; ಏನು ಹೇಳುತ್ತವೆ ಅಂಕಿ- ಅಂಶ?

2024ರ ಚುನಾವಣೆಗೆ ಪ್ರಕಟಿಸಿರುವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ SCSP/TSP ಕಾಯ್ದೆಯನ್ನು ಕೇಂದ್ರದಲ್ಲಿಯೂ ಜಾರಿಗೊಳಿಸುವುದಾಗಿ...

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ ಸಿದ್ದರಾಮಯ್ಯ

"ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ...

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...