ಬ್ಯಾಡ್ಮಿಂಟನ್‌ | ಇತಿಹಾಸ ನಿರ್ಮಿಸಿದ ಸ್ವಾತಿಕ್‌-ಚಿರಾಗ್‌ ಜೋಡಿ

Date:

  • ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್
  • ಡಬಲ್ಸ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಸ್ವಾತಿಕ್‌-ಚಿರಾಗ್‌ ಜೋಡಿ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ. ಟೂರ್ನಿಯ ಇತಿಹಾಸದಲ್ಲೇ ಡಬಲ್ಸ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಕೀರ್ತಿಗೆ ಸ್ವಾತಿಕ್‌-ಚಿರಾಗ್‌ ಪಾತ್ರರಾಗಿದ್ದಾರೆ.

ದುಬೈನಲ್ಲಿ ನಡೆದ ಪುರುಷರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಮಲೇಷ್ಯಾದ ಎಂಟನೇ ಶ್ರೇಯಾಂಕದ ಯೂ ಸಿನ್ ಒಂಗ್ ಮತ್ತು ಈ ಯಿ ಟಿಯೊ ಜೋಡಿಯನ್ನು 2-1 ಸೆಟ್‌ಗಳ ಅಂತರದಲ್ಲಿ ಸ್ವಾತಿಕ್‌-ಚಿರಾಗ್‌ ಜೋಡಿ ಮಣಿಸಿದರು.

ಈ ಮೂಲಕ ಕೂಟದ ಇತಿಹಾಸದಲ್ಲಿ, 58 ವರ್ಷಗಳ ಬಳಿಕ  ಭಾರತಕ್ಕೆ ಎರಡನೇ ಚಿನ್ನದ ಪದಕ ತಂದುಕೊಟ್ಟರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊದಲ ಗೇಮ್‌ ಅನ್ನು 16-21 ಅಂತರದಲ್ಲಿ ಸೋತರೂ ಸಹ ಛಲ ಬಿಡದೆ ಹೋರಾಡಿದ ಸ್ವಾತಿಕ್‌-ಚಿರಾಗ್‌ ಜೋಡಿ ನಂತರದ ಎರಡು ಸೆಟ್‌ಗಳನ್ನು 21-17, 21-19 ಅಂತರದಲ್ಲಿ ಗೆದ್ದು ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಮೊಹಾಲಿಯಲ್ಲಿ ʻರನ್‌ ಹೊಳೆʼ; ಪಂಜಾಬ್ ವಿರುದ್ಧ‌ ರಾಹುಲ್ ಪಡೆಗೆ ಭರ್ಜರಿ ಜಯ

1965ರ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಾಂಪಿಯನ್‌ ಆಗುವ ಮೂಲಕ ದಿನೇಶ್ ಖನ್ನಾ ಅವರು, ಕೂಟದಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ತಂದುಕೊಟ್ಟಿದ್ದರು.

ಆದರೆ ಡಬಲ್ಸ್‌ ವಿಭಾಗದಲ್ಲಿ ಏಷ್ಯನ್ ಚಾಂಪಿಯನ್‌ಶಿಪ್‌ನ ಫೈನಲ್‌ ತಲುಪಿ, ಪದಕ ಮುಡಿಗೇರಿಸಿಕೊಂಡ  ಮೊದಲ ಭಾರತೀಯ ಜೋಡಿ ಎಂಬ ಕೀರ್ತಿಯೂ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರದ್ದಾಯಿತು.

ಟೋಕಿಯೊದಲ್ಲಿ ನಡೆದ 2022ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಡಬಲ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸ್ವಾತಿಕ್‌-ಚಿರಾಗ್‌ ಜೋಡಿ, ಏಷ್ಯನ್ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ (2016, 2020) ಎರಡು ಕಂಚಿನ ಪದಕ ಸಾಧನೆ ಮಾಡಿದ್ದರು.

ಪ್ರಧಾನಿ ಮೋದಿ ಅಭಿನಂದನೆ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯನ್ನು ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಐತಿಹಾಸಿಕ ಸಾಧನೆ ಹೆಮ್ಮೆ ತಂದಿದೆ. ಅಭಿನಂದನೆಗಳು, ಮುಂದಿನ ಸ್ಪರ್ಧೆಗಳಿಗೂ ಶುಭ ಹಾರೈಕೆಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ...

ಐಪಿಎಲ್ | ಕೆ ಎಲ್ ರಾಹುಲ್ ನೇತೃತ್ವದ ಲಕ್ನೋಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಐಪಿಎಲ್‌ನ 26ನೇ...

ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಮೇರಿ ಕೋಮ್ ರಾಜೀನಾಮೆ

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಒಲಿಂಪಿಕ್ ಪದಕ ವಿಜೇತೆ...

ಐಪಿಎಲ್ 2024 | ಮುಂಬೈಗೆ ಭರ್ಜರಿ ಗೆಲುವು; ಆರ್‌ಸಿಬಿಗೆ 5ನೇ ಸೋಲು

ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್​ಗಳ...