ಬೆಂಗಳೂರು | ಮುದ್ರಾ ಯೋಜನೆಯಡಿ ₹10 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ ₹1.63 ಲಕ್ಷ ವಂಚನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ಜಾಲಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಪೊಲೀಸರು ಈ ಬಗ್ಗೆ ಎಷ್ಟೆ ಎಚ್ಚರಿಕೆ ವಹಿಸಿ ಎಂದು ಹೇಳಿದರೂ ಕೂಡ ವಂಚಕರ ಜಾಲದಲ್ಲಿ ಜನರು ಸಿಲುಕುತ್ತಿದ್ದಾರೆ. ಇದೀಗ, ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ (ಪಿಎಂಎಂವೈ) ₹10 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ₹1.63ಲಕ್ಷ ಹಣ ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಿ.ನಾರಾಯಣಸ್ವಾಮಿ ವಂಚನೆಗೆ ಒಳಗಾದವರು. ಇವರು ಬೆಂಗಳೂರಿನ ಹುಳಿಮಾವು ನಿವಾಸಿ. ಇವರು ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.

ಏನಿದು ಘಟನೆ ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಾರಾಯಣಸ್ವಾಮಿ ಅವರಿಗೆ ಹಣದ ಅಗತ್ಯವಿದ್ದ ಹಿನ್ನೆಲೆ, ಸಾಲ ಪಡೆದುಕೊಳ್ಳಲು ಮುಂದಾಗುತ್ತಾರೆ. ಈ ವೇಳೆ, ಮುದ್ರಾ ಯೋಜನೆಯಡಿ ಸಾಲ ಪಡೆಯಲು ಆನ್‌ಲೈನ್‌ನಲ್ಲಿ ಮಾಹಿತಿ ಹುಡುಕುವಾಗ ಮೊಬೈಲ್ ಸಂಖ್ಯೆಯೊಂದು ಸಿಕ್ಕಿದೆ.

ಆನ್‌ಲೈನ್ ದೊರೆತ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಣೆ ಮಾಡಿದ್ದಾರೆ. ಅವರು ಮುದ್ರಾ ಯೋಜನೆಯಡಿ ₹10 ಲಕ್ಷ ಸಾಲ ಕೊಡಿಸುವುದಾಗಿ ಹೇಳಿ ಭರವಸೆ ಮೂಡಿಸಿದ್ದಾರೆ. ಈ ವೇಳೆ, ಸಾಲ ಪಡೆಯಲು ಕೆಲವು ದಾಖಲಾತಿಗಳು ಬೇಕು ಎಂದು ಹೇಳಿ ನಾರಾಯಣಸ್ವಾಮಿ ಅವರ ವೈಯಕ್ತಿಕ ವಿವರ, ಬ್ಯಾಂಕ್ ಖಾತೆ ಸೇರಿದಂತೆ ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ.

ಬಳಿಕ, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಮತ್ತು ಮುದ್ರಾ ಯೋಜನೆಯ ನಕಲಿ ಲೆಟರ್‌ಹೆಡ್ ಬಳಸಿ ₹10 ಲಕ್ಷ ಸಾಲ ಮಂಜೂರಾಗಿದೆ ಎಂದು ನಾರಾಯಣಸ್ವಾಮಿ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಕಳುಹಿಸಿದ್ದಾರೆ. ಜತೆಗೆ, ನಕಲಿ ಅಗ್ರಿಮೆಂಟ್, ನಕಲಿ ಬಾಂಡ್‌ಗಳು ಹಾಗೂ ನಕಲಿ ಸಾಲ ಮಂಜೂರಾತಿ ಪತ್ರಗಳನ್ನೂ ಲಗತ್ತಿಸಿದ್ದಾರೆ. ಸಾಲದ ಹಣ ನಿಮ್ಮ ಖಾತೆಗೆ ಕ್ರೆಡಿಟ್ ಆಗಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಹೇಳೀದ್ದಾರೆ.

ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ(ಪಿಎಂಎಂವೈ) 10 ಲಕ್ಷ ರೂಪಾಯಿ ಸಾಲ ನೀಡುವುದಾಗಿ ಹೇಳಿ ನಾನಾ ಶುಲ್ಕಗಳ ನೆಪದಲ್ಲಿ ₹1.63 ಲಕ್ಷ ವರ್ಗಾಯಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಲೆಮರೆಸಿಕೊಂಡಿದ್ದ ಮೂವರು ರೌಡಿಶೀಟರ್​ಗಳ​ ಬಂಧಿಸಿದ ಸಿಸಿಬಿ ಪೊಲೀಸರು

ಸಾಲ ಮಂಜೂರು ಮಾಡದೇ, ಪದೇ ಪದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡ ನಾರಾಯಣಸ್ವಾಮಿ ಅವರು ಲೋನ್ ಮಾಡುವುದು ಬೇಡ ನಾನು ಕೊಟ್ಟಿರುವ ಹಣವನ್ನು ಹಿಂತಿರುಗಿಸಿ ಎಂದು ಹೇಳಿದ್ದಾರೆ.

ನಾರಾಯಣಸ್ವಾಮಿ ಅವರು ಮರಳಿ ಹಣ ನೀಡಿ ಎಂದು ಕೇಳಿದಾಗ ವಂಚಕರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಆಗ ನಾರಾಯಣಸ್ವಾಮಿ ಅವರಿಗೆ ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ.

ಸದ್ಯ ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿನ ಸಣ್ಣಪುಟ್ಟ ವ್ಯತ್ಯಾಸ ಸುಖಾಂತ್ಯ ಆಗಲಿದೆ: ವಿಜಯೇಂದ್ರ

ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ...

ಬೆಂಗಳೂರು | ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ...

ತುಮಕೂರು | ಅಸಮರ್ಪಕ ವಿದ್ಯುತ್‌ ಪೂರೈಕೆ; ಸಂಕಷ್ಟದಲ್ಲೂ ಸಿಬ್ಬಂದಿ ಬೇರೆಡೆ ನಿಯೋಜನೆ; ರೈತರ ಆಕ್ರೋಶ

ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ...

ಡಿ ವಿ ಸದಾನಂದಗೌಡ ಕುರಿತು ಕುತೂಹಲ ಸೃಷ್ಟಿಸಿದ ಡಿ ಕೆ ಶಿವಕುಮಾರ್‌ ಹೇಳಿಕೆ

ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರವಾಗಿ...