ಬೆಂಗಳೂರು | ಮಣಿಪುರ ಹಿಂಸಾಚಾರ – ಮೋದಿ ಮೌನ ಖಂಡಿಸಿ ಪ್ರತಿಭಟನೆ

Date:

ಕಳೆದ 80 ದಿನಗಳಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆಗಳು ನಡೆಯುತ್ತಿವೆ. ಮಣಿಪುರದಲ್ಲಿ ಹಿಂಸಾಚಾರವನ್ನು ತಡೆಯುವಂತೆ ಆಗ್ರಹಿಸಿ ಹಾಗೂ ಪ್ರಧಾನಿ ಮೋದಿ ಅವರ ಮೌನವನ್ನು ಖಂಡಿಸಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಹಲವಾರು ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಟೌನ್‌ಹಾಲ್‌ ಎದುರು ಪ್ರತಿಭಟನೆ ನಡೆಸಿದ ನಾಗರಿಕರು, ಹೋರಾಟಗಾರರು Justice For Manipur ಎಂದು ಘೋಷಣೆ ಕೂಗಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಸಂವಿಧಾನ ಉಳಿಸಿ – ಹೆಣ್ಣನ್ನು ರಕ್ಷಿಸಿ, ಆಳುವವರು ಅಳಿಸುತ್ತಿದ್ದಾರೆ, ಮಣಿಪುರದ ಜನರಿಗಾಗಿ ನಮ್ಮ ಮೌನ ಕಣ್ಣೀರು – ಎಂಬ ಬಿತ್ತಿ ಫಲಕಗಳನ್ನು ಹಿಡಿದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಣಿಪುರದಲ್ಲಿ ಇಂಟರ್ನೆಟ್ ಸೇವೆಯನ್ನು ಮರುಸ್ಥಾಪಿಸಬೇಕು. ಹಿಂಸಾಚಾರ ನಿಯಂತ್ರಿಸಲು ವಿಫಲರಾದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು. ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಹೋರಾಟಗಾರ್ತಿ ಅಕೈ ಪದ್ಮಶಾಲಿ, ಕೆಆರ್‌ಎಸ್ ಪಕ್ಷದ ನಾಯಕಿ ಜನನಿ ವತ್ಸಲ, ಕೆ.ಎಸ್‌ ವಿಮಲ ಸೇರಿದಂತೆ ಹಲವಾರು ಹೋರಾಗರರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...