ಬೆಂಗಳೂರು ಮಳೆ | ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

Date:

  • ಅರ್ಧಗಂಟೆ ಸುರಿದ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥ
  • ಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅರ್ಧ ಗಂಟೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಕೆ.ಆರ್‌ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿಗೆ ಯುವತಿ ಬಲಿಯಾದ ಬೆನ್ನಲ್ಲೆ, ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 31 ವರ್ಷದ ಯುವಕನೋರ್ವ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆ ವರದಿಯಾಗಿದೆ.

ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾರೆ. ಮೃತನನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಸೋಮವಾರ ಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಭಾನುವಾರ ಬೆಂಗಳೂರಿನಲ್ಲಿ ಸುರಿದ ಕೇವಲ ಅರ್ಧ ಗಂಟೆ ಮಳೆ ಎರಡು ಅಮಾಯಕ ಜೀವವನ್ನೇ ಬಲಿ ಪಡೆದಿದೆ. ನಗರದಲ್ಲಿ ನೂರಾರು ಮರಗಳು ಧರೆಗುರುಳಿವೆ. ಈ ವೇಳೆ, ಕಾರು ಬೈಕ್ ಜಖಂ ಆಗಿವೆ. ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿವೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ನೂರಾರು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಒಟ್ಟಿನಲ್ಲಿ ಅರ್ಧಗಂಟೆ ಸುರಿದ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...