ಬಾಂಗ್ಲಾದೇಶ | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ; 46 ಸಾವು

Date:

ಬಾಂಗ್ಲಾದೇಶ ದ ರಾಜಧಾನಿ ಢಾಕಾದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿ ಕನಿಷ್ಠ 43ಕ್ಕೂ ಮಂದಿ ಮೃತಪಟ್ಟಿದ್ದಾರೆ.

ಸ್ಥಳೀಯ ಕಾಲಮಾನದ ಪ್ರಕಾರ ಗುರುವಾರ (ಫೆ.29) ರಾತ್ರಿ 10 ಗಂಟೆ ಸಮಯದಲ್ಲಿ ಬಹುಮಹಡಿ ಕಟ್ಟಡದಲ್ಲಿನ ರಸ್ಟೋರೆಂಟ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ.

75ಕ್ಕೂ ಹೆಚ್ಚು ಮಂದಿಯನ್ನು ಘಟನಾ ಸ್ಥಳದಿಂದ ರಕ್ಷಿಸಲಾಗಿದ್ದು, 12ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವು ಗಂಟೆಗಳ ನಂತರ ಬೆಂಕಿಯು ನಿಯಂತ್ರಣಕ್ಕೆ ಬಂದಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಬಾಂಗ್ಲಾದೇಶದ ಆರೋಗ್ಯ ಸಚಿವೆ ಸಮಂತ ಲಾಲ್ ಸೇನ್, ಇಲ್ಲಿಯವರೆಗೂ ಢಾಕಾ ವೈದ್ಯಕೀಯ ಆಸ್ಪತ್ರೆಯಲ್ಲಿ ಮಹಿಳೆಯರು ಮಕ್ಕಳು ಸೇರಿ ಕನಿಷ್ಠ 33 ಮಂದಿ ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ. ಉಳಿದ 10 ಮಂದಿ ಮತ್ತೊಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 22 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.

ಏಳು ಅಂತಸ್ತಿನ ಕಟ್ಟಡದಲ್ಲಿದ್ದ ಕಚ್ಚಿ ಭಾಯಿ ರಸ್ಟೋರೆಂಟ್‌ನಲ್ಲಿ ದುರಂತ ಸಂಭವಿಸಿದ್ದು,ಬೆಂಕಿ ಹೊತ್ತೊಹೊಂಡ ತಕ್ಷಣ ತುರ್‍ತು ಸೇವಾ ಘಟಕಕ್ಕೆ ಕರೆ ಮಾಡಲಾಯಿತು ಎಂದು ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ.

ಅನಿಲ ಸೋರಿಕೆ ಅಥವಾ ಸ್ಟವ್‌ನಿಂದಾಗಿ ದುರಂತ ಸಂಭವಿಸರಬಹುದು. ಪ್ರತಿ ಅಂತಸ್ತಿನಲ್ಲೂ ಅನಿಲ ಸಿಲಿಂಡರ್‌ಗಳಿದ್ದು,ಕಟ್ಟಡದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾರಿನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ಕೆನಡಾ ದ...

17 ಭಾರತೀಯ ಸಿಬ್ಬಂದಿಗಳಿದ್ದ ಇಸ್ರೇಲ್‌ ಮೂಲದ ಸರಕು ಹಡಗು ವಶಪಡಿಸಿಕೊಂಡ ಇರಾನ್

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು...

ಇಸ್ರೇಲ್ ಕಡೆಗೆ ಹಲವು ಡ್ರೋನ್‌ಗಳನ್ನು ಹಾರಿಸಿದ ಇರಾನ್: ಯುದ್ಧದ ಭೀತಿ

ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರ ಕಚೇರಿಯ ಮೇಲೆ ಕಳೆದ ವಾರ ಇಸ್ರೇಲ್ ದಾಳಿ...

ಇಸ್ರೇಲ್ ಮೇಲೆ ಶೀಘ್ರ ಇರಾನ್ ದಾಳಿ ಸಾಧ್ಯತೆ: ಬೈಡನ್ ಎಚ್ಚರಿಕೆ

ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ...