ಬಂಟ್ವಾಳ | ಉದ್ಯೋಗ ಸಿಗದ ಚಿಂತೆ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹಿಂದೂ ಯುವಕನನ್ನು ರಕ್ಷಿಸಿದ ಮುಸ್ಲಿಂ ಯುವಕರು

Date:

ಪದವೀಧರನಾಗಿಯೂ ನಿರುದ್ಯೋಗಿಯಾಗಿದ್ದ ಹಿಂದೂ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ, ಸ್ಥಳೀಯ ಮುಸ್ಲಿಂ ಯುವಕರು ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನಡೆದಿದೆ.

ನಿರುದ್ಯೋಗಿಯಾಗಿದ್ದ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯ ಮುಸ್ಲಿಂ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿರುವುದಾಗಿ ವರದಿಯಾಗಿದೆ.

ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂಬಾತನೇ ನೇತ್ರಾವತಿ ನದಿಗೆ ಹಾರಲು ಯತ್ನಿಸಿದ ಯುವಕ. ಈತ ಎಂಎಸ್ ಡಬ್ಲ್ಯೂ ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ವಿಚಾರಿಸಿದಾಗ ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಪಾಣೆಮಂಗಳೂರಿನ ನೇತ್ರಾವತಿ ಸೇತುವೆ

ಸೋಮವಾರ ಬೆಳಗ್ಗೆ ನೇತ್ರಾವತಿ ನದಿಯ ಸಮೀಪಕ್ಕೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ, ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರಾದ ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಾಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್‌ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿದ್ದಾರೆ.

ಆ ಬಳಿಕ ತುರ್ತು ಸಂಖ್ಯೆ 112ಕ್ಕೆ ಕರೆ ಮಾಡಿ, ಬಂಟ್ವಾಳ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸಿದ್ದು, ಪೋಷಕರಿಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...