ಮಂಡ್ಯಕ್ಕೆ ಭೇಟಿ ನೀಡಲಿರುವ ಬರಾಕ್ ಒಬಾಮ, ದಲೈಲಾಮ

Date:

ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಟಿಬೆಟಿಯನ್ ಧಾರ್ಮಿಕ ಗುರು ದಲೈಲಾಮಾ ಅವರು ಡಿಸೆಂಬರ್‌ನಲ್ಲಿ ರಾಜ್ಯದ ಮಂಡ್ಯ ಜಿಲ್ಲೆಗೆ ಭೇಟಿ ನೀಡಿ, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಗ್ರಾಮದಲ್ಲಿ ಭೂತಾಯಿ ಟ್ರಸ್ಟ್ ಈ ಆಧ್ಯಾತ್ಮಿಕ ಕೇಂದ್ರವನ್ನು ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಅಮೆರಿಕಾದ ವೈದ್ಯ ಡಾ. ಲಕ್ಷ್ಮೀನರಸಿಂಹ ಮೂರ್ತಿ ನೇತೃತ್ವದ ನಿಯೋಗ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಹಲ್ಲೇಗೆರೆ ಗ್ರಾಮಕ್ಕೆ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸಲು ನೆರವು ನೀಡುವಂತೆ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಗಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಅಧಿಕಾರಿಗಳ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಆಧ್ಯಾತ್ಮಿಕ ಕೇಂದ್ರದ ಕಾರ್ಯವೈಖರಿಯನ್ನು ವಿವರಿಸಿದ ನಿಯೋಗದ ಸದಸ್ಯರು, ಹಲ್ಲೇಗೆರೆ ಮಂಡ್ಯ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ಹೇಳಿದ್ದಾರೆ.

ಭೂತಾಯಿ ಟ್ರಸ್ಟ್ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರವನ್ನು ಸ್ಥಾಪಿಸುವ ಮಹದಾಶಯ ಹೊಂದಿದೆ. ಇದರ ಶಂಕುಸ್ಥಾಪನೆಗಾಗಿ ಬರಾಕ್ ಒಬಾಮಾ ದಂಪತಿ ಹಾಗೂ ಟಿಬೆಟಿಯನ್ ಧರ್ಮಗುರು ದಲೈಲಾಮಾ ಆಗಮಿಸುವರು. ಹೀಗಾಗಿ ಹಲ್ಲೇಗೆರೆ ಗ್ರಾಮದಲ್ಲಿ ಹೆಲಿಪ್ಯಾಡ್, ರಸ್ತೆ ನಿರ್ಮಾಣ, ವಿದ್ಯುತ್ ದೀಪಗಳ ವ್ಯವಸ್ಥೆ, ಚರಂಡಿ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸರ್ಕಾರದಿಂದ ಒದಗಿಸಿಕೊಡಬೇಕೆಂದು ನಿಯೋಗದ ಸದಸ್ಯರು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮುಸ್ಲಿಂ ಯುವಕರಿಂದ ಖಬರ ಸ್ಥಾನ ಸ್ವಚ್ಛತಾ ಕಾರ್ಯಕ್ರಮ

ಅಮೆರಿಕಾ ಹಾಲಿ ಅಧ್ಯಕ್ಷ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಅವರು ಭಾರತೀಯ ಮೂಲದವರು. ಡಾ ವಿವೇಕ್ ಮೂರ್ತಿ ಅಮೆರಿಕಾದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು.

ಡಾ. ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ (ಎಲ್ ಎನ್ ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ. ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೇಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್‌ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿ, ಕಾರ್ಯಪ್ರವೃತ್ತರಾಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮತದಾನ ಪ್ರಮಾಣ ಹೆಚ್ಚಿಸಲು ವಾಕಥಾನ್ ಜಾಥಾ

ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ...

ವಿಜಯಪುರ | ಸ್ವಚ್ಚತೆ ಕಾಣದೆ ತುಂಬಿ ಹರಿಯುತ್ತಿವೆ ಚರಂಡಿ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಬಗೇರಿ,...

ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ...

ಚಿತ್ರದುರ್ಗ | ಕುಡಿಯುವ ನೀರಿನ ಅಪವ್ಯಯ, ಆನಧಿಕೃತ ದುರ್ಬಳಕೆ ತಡೆಗಟ್ಟಿ; ತಾ.ಪಂ ಇಒ ಶಿವಪ್ರಕಾಶ್

ಗ್ರಾಮಗಳಲ್ಲಿ ಕುಡಿಯುವನೀರಿನ ಅಪವ್ಯಯ ಹಾಗೂ ಆನಧಿಕೃತ ದುರ್ಬಳಕೆ ತಡೆಗಟ್ಟುವಂತೆ ಚಿತ್ರದುರ್ಗ ಜಿಲ್ಲೆಯ...