ತಿಹಾರ್ ಜೈಲು ಕಂಡುಬಂದ ಮನುಷ್ಯನನ್ನು ಮರ್ಯಾದೆ ಇಲ್ಲದೆ ಡಿಸಿಎಂ ಮಾಡಿದ್ದೀರಿ; ಸಿಎಂ ವಿರುದ್ಧ ಯತ್ನಾಳ್‌ ಕಿಡಿ

Date:

  • ಡಿಕೆಶಿ ಪಕ್ಕ ಕುಳಿತುಕೊಂಡು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡುವುದು ಜಾಣ ಕಿವುಡುತನ
  • ಮಾಡಾಳ್ ವಿರೂಪಾಕ್ಷಪನವರ ಮೇಲೆ ನಮ್ಮ ಪಕ್ಷ ಕ್ರಮ ಕೈಗೊಂಡು, ಟಿಕೆಟ್‌ ನೀಡಲಿಲ್ಲ

ಐಟಿ ದಾಳಿಯಲ್ಲಿ ಸಿಕ್ಕ ಕೋಟ್ಯಂತರ ರೂಪಾಯಿ ಹಣ ಈಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ. ಬಿಜೆಪಿಯ ಆರೋಪಗಳಿಗೆ ಉತ್ತರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ‌ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಯತ್ನಾಳ್‌, “ಮಾನ್ಯ ಸಿದ್ದರಾಮಯ್ಯನವರೇ, ತಾವು ಡಿಕೆ ಶಿವಕುಮಾರ್‌ ಅವರ ಮಾನ ಮರ್ಯಾದೆ ಹೀಗೆ ಕಳೆಯಬಾರದು. ಮಾಡಾಳ್ ವಿರೂಪಾಕ್ಷಪನವರ ಮೇಲೆ ನಮ್ಮ ಪಕ್ಷ ಕ್ರಮ ಕೈಗೊಂಡು, ಅವರಿಗೆ ಈ ಬಾರಿ ಟಿಕೆಟ್‌ ಅನ್ನು ಸಹ ಬಿಜೆಪಿ ನೀಡಲಿಲ್ಲ. ಆದರೆ, ನಿಮ್ಮಲ್ಲಿ ತಿಹಾರ್ ಜೈಲಿನಿಂದ ಬಂದ ಮನುಷ್ಯನನ್ನು ಮಾನ ಮರ್ಯಾದೆ ಇಲ್ಲದೆ ಉಪಮುಖ್ಯಮಂತ್ರಿ ಮಾಡಿದ್ದೀರಿ. ಅವರ ಪಕ್ಕ ಕುಳಿತುಕೊಂಡು ನೀವು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡುವುದು ಜಾಣ ಕಿವುಡು ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಏನು ಹೇಳಿದ್ದರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ತಿರುಗೇಟು ನೀಡಿದ್ದ ಸಿದ್ದರಾಮಯ್ಯ, “ಕೋಟ್ಯಂತರ ರೂಪಾಯಿ ಲಂಚ ಹೊಡೆಯುತ್ತಿದ್ದಾಗಲೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದಾಗ ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದ ಬಿಜೆಪಿ ನಾಯಕರು ಈಗ ಯಾವುದೋ ಖಾಸಗಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಈ ನೈತಿಕತೆ ಬಿಜೆಪಿಗೆ ಇದೆಯೇ” ಎಂದು ಪ್ರಶ್ನಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ

“ದುರುದ್ದೇಶ ಮತ್ತು ಭ್ರಷ್ಟತೆಯನ್ನು ಮುಚ್ಚಿಕೊಳ್ಳುವುದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ, ಈ ಬಗ್ಗೆ ಯಾವುದಾದರೂ ಪುರಾವೆಗಳಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಅವರು ಸ್ವತಂತ್ರರಿದ್ದಾರೆ. ತೆರಿಗೆ ವಂಚಕರ ವಿರುದ್ಧದ ಕ್ರಮಗಳನ್ನು ನಾವು ಸ್ವಾಗತಿಸುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...