ನಾವು ಬಿಡುಗಡೆ ಮಾಡಿರುವ 650 ಕೋಟಿ ಇಟ್ಟುಕೊಂಡು ಡಿಕೆ ವಿಷಯ ಡೈವರ್ಟ್ ಮಾಡ್ತಿದಾರೆ: ಬೊಮ್ಮಾಯಿ ಆರೋಪ

Date:

  • ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ
  • ಮಾರ್ಚ್‌ನಲ್ಲಿ ನಾವು ಹಣ ಬಿಡುಗಡೆ ಮಾಡಿದ್ದೇವೆ, ಸುಳ್ಳು ಹೇಳಿಲ್ಲ

ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾಗಿರುವ 650 ಕೋಟಿ ರೂ. ಯಾಕೆ ಇಟ್ಟುಕೊಂಡಿದ್ದಾರೆ. ತನಿಖೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ಇದು ಅನುಮಾನಕ್ಕೆ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ ಬಿಡುಗಡೆಯಾಗುರುವ 650 ಕೋಟಿ ರೂ.ಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಯಾಕೆ ಇಟ್ಟುಕೊಂಡಿದ್ದಾರೆ. ತನಿಖೆ ಮಾಡುತ್ತೇವೆ ಅಂತ ಹೇಳಿ ‍ಹೆದರಿಸುತ್ತಿದ್ದಾರೆ. ಇದು ಅನುಮಾನಕ್ಕೆ ಕಾರಣವಾಗಿದೆ ಎಂದರು.

ಕಾಂಟ್ರಾಕ್ಟರ್ ಕಡೆಯವರೇ ಆಣೆ ಪ್ರಮಾಣ ಮಾಡುವಂತೆ ಹೇಳಿದ್ದಾರೆ‌. ಅದನ್ನು ವಿಷಯಾಂತರ ಮಾಡುವ ಬದಲು, ಸರ್ಕಾರ ಗುತ್ತಿಗೆದಾರರ ಹಣ ಬಿಡುಗಡೆ ಮಾಡಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸಚಿವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ನಿನ್ನೆ ಶಾಂಗ್ರಿಲಾದಲ್ಲಿ ಕಮಿಷನ್ ಮಾತುಕತೆ ನಡೆಯುತ್ತಿದೆ ಅಂತ ಹೇಳಿದ್ದರು. ಅವರ ಮೇಲೆ ಏನು ಒತ್ತಡ ಇದೆಯೋ ಗೊತ್ತಿಲ್ಲ. ಈಗ ಯಾರೂ ಕಮಿಷನ್ ಕೇಳಿಲ್ಲ ಅಂತ ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಾವು ಮಾರ್ಚ್‌ನಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ನಾವೇನು ಸುಳ್ಳು ಹೇಳಬೇಕಿಲ್ಲ. ಅವರು ಹಣ ಬಿಡುಗಡೆ ಮಾಡದ ಕಾರಣ ಈಗ ಗುತ್ತಿಗೆದಾರರು ಸಿಎಂ, ಡಿಸಿಎಂ, ರಾಜ್ಯಪಾಲರ ಬಳಿ ಓಡಾಡುತ್ತಿದ್ದಾರೆ. ಈಗ ಬಿಬಿಎಂಪಿಯಲ್ಲಿ ತೆರಿಗೆ ಸಂಗ್ರಹ ಮಾಡಿದ್ದಾರೆ. ಅದರಲ್ಲಿ ಗುತ್ತಿಗೆದಾರರ ಹಣ ಕೊಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ರಾಹುಲ್‌ ಗಾಂಧಿಗೆ ಮನಸಿಲ್ಲ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಲ್ಲಿ ಮಧ್ಯ ಪ್ರವೇಶಿಸಲು ಮನಸಿಲ್ಲ‌. ಎಟಿಎಂ ಅಂತ ಏನು ಹೆಸರಿದೆಯೋ ಅದು ಸತ್ಯವಾಗಿರುವುದರಿಂದ ಅವರು ರಾಜ್ಯ ಸರ್ಕಾರದ ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಇಲ್ಲಿ ಮಧ್ಯಪ್ರವೇಶ ಮಾಡಲು ಬರುತ್ತಿಲ್ಲ” ಎಂದು ಕಿಡಿಕಾರಿದರು.

“ರಾಜ್ಯ ಸರ್ಕಾರ ಜನರಿಗೆ ಬೇಕಾಗಿರುವ ಕಾಮಗಾರಿ ಮಾಡದಿದ್ದರೆ ಬ್ರ್ಯಾಂಡ್ ಬೆಂಗಳೂರು ಯೋಜನೆ ಯಶಸ್ವಿಯಾಗುವುದಿಲ್ಲ. ನಮ್ಮ ಅವಧಿಗೂ ಹಿಂದಿನಿಂದಲೂ ಬಾಕಿ ಉಳಿದಿದೆ‌. ನಾವು ಹಿರಿತನದ ಆಧಾರದಲ್ಲಿ ಬಿಲ್ ಪಾವತಿ ಮಾಡಲು ನಿಯಮ ಮಾಡಿದ್ದರಿಂದ ವ್ಯವಸ್ಥಿತವಾಗಿ ಹಣ ಬಿಡುಗಡೆಯಾಗುತ್ತಿತ್ತು. ಈ ಸರ್ಕಾರ ಇಲ್ಲದ ಸಬೂಬು ಹೇಳದೇ ಗುತ್ತಿಗೆದಾರರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೇಹಾ ಕೊಲೆ ಆರೋಪಿಯನ್ನು ಗಲ್ಲಿಗೇರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

ನೇಹಾ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು...

ʼಈ ದಿನʼ ಸಮೀಕ್ಷೆ | ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ; ಮೋದಿಯ ನಿಜಮುಖ ಅರಿತ ಜನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಭಾರೀ...

ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ...

ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ...