ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ಬಸವರಾಜ ರಾಯರೆಡ್ಡಿ ನೇಮಕ

Date:

ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಿಸಲಾಗಿದೆ.

ಈ ಕುರಿತು ಶುಕ್ರವಾರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ.

ರಾಯರೆಡ್ಡಿ ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದ ರಾಯರೆಡ್ಡಿ ಅವರ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಸಿದ್ದರಾಮಯ್ಯ ಮಾಡಿದ್ದಾರೆ ಎನ್ನಲಾಗಿದೆ.

ಅಸಮಾಧಾನಗೊಂಡಿದ್ದ ರಾಯರೆಡ್ಡಿ ಅವರು ಸಚಿವರ ವಿರುದ್ಧ ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಬರೆದು ಮುಜುಗರ ತರುತ್ತಿದ್ದರು. ಇತ್ತೀಚೆಗೆ ಪಕ್ಷದ ವರಿಷ್ಠರು ನಿಗಮ ಮಂಡಳಿ ಸ್ಥಾನಮಾನ ನೀಡುವುದಾಗಿ ಹೇಳಿದ್ದರೂ ನಯವಾಗಿ ತಿರಸ್ಕರಿಸಿದ್ದರು. ಈಗ ಸರ್ಕಾರ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

“ವೈಯಕ್ತಿಕವಾಗಿ ಯಾರ ಬಗ್ಗೆಯೂ ಅಸಮಾಧಾನವಿಲ್ಲ. ಕ್ಷೇತ್ರದ ಕೆಲಸ ಮಾಡಿಕೊಂಡು ಹೋಗುತ್ತಿದ್ದೆ. ಈಗ ಮುಖ್ಯಮಂತ್ರಿಯೇ ಜವಾಬ್ದಾರಿ ನೀಡಿದ್ದಾರೆ. ಕೊಟ್ಟ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಣೆ ಮಾಡುವೆ. ಅವಕಾಶ ಕೊಟ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದಗಳನ್ನು ತಿಳಿಸುವೆ” ಎಂದು ರಾಯರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು...

ಜನ ಹಸಿವಿನಿಂದ ಬಳಲುತ್ತಿಲ್ಲ ಎಂದಾದರೆ 83ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಯಾಕಾಗಿ? : ಪರಕಾಲ ಪ್ರಭಾಕರ

"ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಸಿವಿನಿಂದ ಜನರು ಕಂಗಾಲಾಗಿದ್ದಾರೆ. ಆದರೆ ಜನರ...

ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...