₹50 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ

Date:

  • ಹಲಸೂರಿನ ಕಚೇರಿಯಲ್ಲಿ ಲಂಚದ ಸಮೇತ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
  • ಬಾಕಿ ಹಣ ಬಿಡುಗಡೆಗೊಳಿಸಲು ₹80 ಸಾವಿರ ಲಂಚ ಕೇಳಿದ್ದ ಆರೋಗ್ಯಾಧಿಕಾರಿ ಶಿವೇಗೌಡ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯಾಧಿಕಾರಿ ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಿ.ವಿ.ರಾಮನ್ ​ನಗರದ ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ ಬಂಧಿತ ವ್ಯಕ್ತಿ. ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆಗೆ ಗುತ್ತಿಗೆ ಪಡೆದಿದ್ದ ಲಕ್ಷ್ಮೀನರಸಿಂಹಸ್ವಾಮಿ ಎಂಟರ್‌ಪ್ರೈಸಸ್‌ ಮಾಲೀಕ ಶ್ರೀನಿವಾಸಲು ಬಾಕಿ ಹಣ ಬಿಡುಗಡೆ ಮಾಡುವಂತೆ ಶಿವೇಗೌಡ ಅವರಿಗೆ ಕೇಳಿದ್ದರು.

ಬಾಕಿ ಹಣ ಬಿಡುಗಡೆಗೊಳಿಸಲು ಶಿವೇಗೌಡ ₹80 ಸಾವಿರ ಲಂಚ ಕೇಳಿದ್ದರು. ಮುಂಗಡವಾಗಿ ಈಗಾಗಲೇ ₹30 ಸಾವಿರ ಲಂಚ ಪಡೆದಿದ್ದು, ಇನ್ನುಳಿದ ₹50 ಸಾವಿರ ಹಣ ಪಡೆಯುವ ವೇಳೆ ಹಲಸೂರು ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿ

ಗುರುವಾರ ಹಣ ಪಡೆಯುವಾಗ ಡಿವೈಎಸ್‌ಪಿ ಸತೀಶ್ ನೇತೃತ್ವದ ತಂಡ ದಾಳಿ ನಡೆಸಿದೆ. ಹಲಸೂರಿನ ಕಚೇರಿಯಲ್ಲಿ ಲಂಚದ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಹೇಳಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...