ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಪತ್ರ

Date:

ಬಿಟ್ ಕಾಯಿನ್ ಹಗರಣದ ಬಗ್ಗೆ ಮರುತನಿಖೆ ನಡೆಸುವುದಾಗಿ ಗೃಹಸಚಿವ ಜಿ ಪರಮೇಶ್ವರ್ ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೇ ಹಗರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಅವರು ಸಿಐಡಿಗೆ ಪತ್ರ ಬರೆದಿದ್ದಾರೆ.

ಬಿಟ್ ಕಾಯಿನ್ ಹಗರಣ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಅತಿ ದೊಡ್ಡ ಹಗರಣವಾಗಿದ್ದು, ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಅದರ ಪ್ರಮುಖ ಆರೋಪಿಯಾಗಿದ್ದ. ರಾಜ್ಯದ ಆಗಿನ ಹಲವು ಪ್ರಭಾವಿ ಸಚಿವರ ಮಕ್ಕಳು ಕೂಡ ಅದರಲ್ಲಿ ಭಾಗವಹಿಸಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಜೊತೆಗೆ ಹಲವು ಪೊಲೀಸ್ ಅಧಿಕಾರಿಗಳು ಕೂಡ ಅವರೊಂದಿಗೆ ಶಾಮೀಲಾಗಿದ್ದಾರೆ ಎನ್ನಲಾಗಿತ್ತು.

ಈ ಹಿಂದೆ ಜಾರಿ ನಿರ್ದೇಶನಾಲಯದಲ್ಲಿ ಈ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇತ್ತೀಚೆಗೆ ಬೆಂಗಳೂರಿಗೆ ವರ್ಗವಾಗಿದ್ದು, ಅವರನ್ನು ಪ್ರಕರಣದ ತನಿಖೆಗೆ ಹಚ್ಚಲಾಗುತ್ತದೆ ಎನ್ನುವ ಸುದ್ದಿ ಇದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ: ಈ ದಿನ ಸಂಪಾದಕೀಯ | ಮಹಿಳೆಯರನ್ನು ಅಪಹಾಸ್ಯ ಮಾಡಿದರೆ, ಪರಿಣಾಮ ಎದುರಿಸಬೇಕಾದೀತು

ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್ ಕಾಯಿನ್‌ಗಳನ್ನು ಕದ್ದಿದ್ದ ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಸೈಬರ್ ಕ್ರೈಂಗಳಲ್ಲಿ ಭಾಗಿಯಾದ ಆರೋಪದಡಿ ಶ್ರೀಕಿ ಹಾಗೂ ಇತರರ ವಿರುದ್ಧ 2021ರ ಫೆಬ್ರವರಿ 22ರಂದು ಮೊದಲ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು.   

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು...

ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...