ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ; ಅನುದಾನ ಬಿಡುಗಡೆಗೆ ಆಗ್ರಹಿಸಿ ಧರಣಿ

Date:

ಹಿಂದುಳಿದ ಚಿತ್ರದುರ್ಗ ಜಿಲ್ಲೆಯ ಮಹತ್ವದ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸಿದೆ. ಆ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದಲ್ಲಿರುವ ಸಂಸದ ಎ ನಾರಾಯಣಸ್ವಾಮಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಮೂರು ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅವರ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.

ಮೂರು ದಿನಗಳಿಂದ ರೈತರು ನಾರಾಯಣಸ್ವಾಮಿ ಅವರ ಕಚೇರಿಯ ಬಾಗಿಲಲ್ಲೇ ರೈತರು ಮಲಗಿದ್ದರು. ಸಂಸದರ ಕಚೇರಿಯ ಮುಂದಿರುವ ಬೆಂಚುಗಳು ಕೂಡಾ ರೈತರಿಗೆ ಮಲಗುವ ತಾಣವಾಗಿದ್ದವು. ರೈತರ ಪ್ರತಿಭಟನೆಗಾಗಿ ಅನೇಕರು ಅಕ್ಕಿ, ಬೇಳೆ, ಎಣ್ಣೆ, ತರಕಾರಿ, ದಿನಸಿ ಸೇರಿದಂತೆ ಅನೇಕ ವಸ್ತುಗಳನ್ನು ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಚೇರಿಯಿಂದ ಸ್ವಲ್ಪ ದೂರದಲ್ಲಿ ಧರಣಿ ನಡೆಸುವಂತೆ ಪೊಲೀಸರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಮಾಡುತ್ತಿರುವ ಧರಣಿಯಿಂದಾಗಿ ಜಿಲ್ಲಾ ಪಂಚಾಯತಿ ಕೆಲಸಗಳಿಗೆ ತೊಂದರೆ ಆಗಬಾರದೆಂದು ರೈತರು ಧರಣಿ ಸ್ಥಳವನ್ನು ಜಿಲ್ಲಾ ಪಂಚಾಯತಿ ಪ್ರವೇಶ ದ್ವಾರಕ್ಕೆ ಸ್ಥಳಾಂತರಿಸಿದ್ದಾರೆ.

ಧರಣಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ, “ಜಿಲ್ಲೆಯಲ್ಲಿ ಈಗಾಗಲೇ ಬರಗಾಲ ತಲೆದೋರಿದೆ. ಇದಕ್ಕೆ ಶಾಶ್ವತ ಪರಿಹಾರ ಭದ್ರಾಮೇಲ್ದಂಡೆ ಯೋಜನೆಯಾಗಿದೆ. ಕೇಂದ್ರ ಸಚಿವರು, ಚಿತ್ರದುರ್ಗ ಸಂಸದರೂ ಆಗಿರುವ ಎ.ನಾರಾಯಣಸ್ವಾಮಿ ಅವರಿಗೆ ಎರಡು ತಿಂಗಳ ಹಿಂದೆಯೇ ಅನುದಾನ ಬಿಡುಗಡೆಗಾಗಿ ಸತ್ಯಾಗ್ರಹ ನಡೆಸಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದೆವು. ಆದರೂ, ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ, ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕಾಗಿತ್ತು. ತುರ್ತಾಗಿ ಕಾಮಗಾರಿ ಮುಗಿಯಬೇಕಿತ್ತು. ಕಾಮಗಾರಿಯಲ್ಲಿ ಎಲ್ಲೆಲ್ಲಿ ಸಮಸ್ಯೆ ಇದೆ ಗಮನಿಸಿ ಸರಿಪಡಿಸಬೇಕಾಗಿತ್ತು. ಆದರೆ, ಯಾವುದನ್ನೂ ರಾಜ್ಯ ಅಥವಾ ಕೇಂದ್ರ ಸರ್ಕಾರಗಳು ಮಾಡಲಿಲ್ಲ. ನಮ್ಮ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗುತ್ತಿದೆ. ಅನುದಾನ ಬಿಡುಗಡೆಯಾಗಿ ಜಿಲ್ಲೆಗೆ ನೀರು ಹರಿಯುವವರೆಗೆ ಧರಣಿಯಿಂದ ಹಿಂದೆ ಸರಿಯುವ ಮಾತೇ ಇಲ್ಲ” ಎಂದು ಪುನರುಚ್ಚರಿಸಿದರು.

ಧರಣಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಮುಖಂಡರಾದ ರಾಮರೆಡ್ಡಿ, ಆರ್.ಬಿ.ನಿಜಲಿಂಗಪ್ಪ, ಮಂಜುನಾಥ್, ಸಿದ್ದಪ್ಪ ಹಳಿಯೂರು, ಬಸವರಾಜಪ್ಪ, ನಾಗರಾಜ ರೆಡ್ಡಿ, ಬಿ.ಲೋಕಣ್ಣ, ಮಂಜಣ್ಣ, ಶರಣಪ್ಪ, ಪ್ರಸನ್ನ, ಪರಮಶಿವಪ್ಪ ಮತ್ತಿತರರು ಭಾಗವಹಿಸಿದ್ದರು.

ಮಂಗಳವಾರ ಬೆಳಗ್ಗೆ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಅವರಿಗೆ ಕರೆ ಮಾಡಿ ನಾರಾಯಣಸ್ವಾಮಿ ಮಾತನಾಡಿದ್ದಾರೆ ಎನ್ನಲಾಗಿದೆ. “ಅಧಿವೇಶನ ಇರುವುದರಿಂದ ಸ್ಥಳಕ್ಕೆ ಬರಲಾಗಿಲ್ಲ. ಅಗತ್ಯ ಕೆಲಸಗಳನ್ನು ಮಾಡುತ್ತೇವೆ. ಅನುದಾನ ಬಿಡುಗಡೆಗೆ ಸಚಿವರೊಂದಿಗೆ ಚರ್ಚಿಸುತ್ತೇನೆ” ಎಂದು ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...