ಮಣಿಪುರದಿಂದ ಆರಂಭವಾದ ಭಾರತ್ ನ್ಯಾಯ ಯಾತ್ರೆ: 66 ದಿನಗಳ ಕಾಲ ನಡೆಯುವ ಅಭಿಯಾನ

Date:

ಕಳೆದ ವರ್ಷ ಭಾರತದ ದಕ್ಷಿಣದಿಂದ ಉತ್ತರಕ್ಕೆ ದೇಶಾದ್ಯಂತ ಯಶಸ್ವಿಯಾಗಿದ್ದ 4 ಸಾವಿರ ಕಿ.ಮೀ.ನ ಭಾರತ್ ಜೋಡೋ ಪಾದಯಾತ್ರೆಯ ನಂತರ ಇಂದಿನಿಂದ ಪೂರ್ವದಿಂದ ಪಶ್ಚಿಮಕ್ಕೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಲಿದೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ನೂರಾರು ನಾಯಕರು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ದೆಹಲಿಯಿಂದ ಮಣಿಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ದೀಪೆಂದರ್ ಹೂಡ, ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ಹಿಂದೆ ಸರಿಯುವುದಿಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆ ಭಾರತದ ಜನರ ನ್ಯಾಯಕ್ಕಾಗಿ ಹೋರಾಟವಾಗಿದೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಣಿಪುರದಿಂದ ಮುಂಬೈವರೆಗೂ 6,713 ಕಿ.ಮೀ ದೂರದವರೆಗೂ ಸಂಚರಿಸಲಿರುವ ಯಾತ್ರೆಯು 67 ದಿನಗಳ ಕಾಲ ನಡೆಯಲಿದೆ ಉತ್ತರ ಪ್ರದೇಶ, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ,ಅಸ್ಸಾಂ ಸೇರಿದಂತೆ ಒಟ್ಟು 15 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಾಗಲಿದೆ. ಮಣಿಪುರದ ಥೌಬಲ್‌ನಿಂದ ಉದ್ಘಾಟನೆಗೊಂಡು ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

‘ನ್ಯಾಯಾಕ್ಕಾಗಿ ಹೋರಾಟ’ ಎಂಬ ಘೋಷಣೆಯೊಂದಿಗೆ ಸಂಚರಿಸಲಿರುವ ಭಾರತ್ ನ್ಯಾಯ ಯಾತ್ರೆಯಲ್ಲಿ ಕಾರ್ಯಕರ್ತರು ಹಾಗೂ ನಾಗರಿಕರು ಸೇರಿದಂತೆ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ನ್ಯಾಯ ಯಾತ್ರೆಯು ಒಟ್ಟು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಮಾರ್ಚ್‌ನಲ್ಲಿ ಅಭಿಯಾನವು ಸಮಾಪ್ತಿಗೊಳ್ಳುತ್ತದೆ.

ಇಂದು(ಜನವರಿ 14) ಪೂರ್ತಿ ಮಣಿಪುರ ರಾಜ್ಯದಲ್ಲಿಯೇ ಯಾತ್ರೆ ಸಂಚರಿಸಲಿದ್ದು, 107 ಕಿ.ಮೀ ಅಂತರದೊಂದಿಗೆ 4 ಜಿಲ್ಲೆಗಳನ್ನು ಒಳಗೊಳ್ಳಲಿದೆ. ನಾಳೆ ಯಾತ್ರೆ ನಾಗಾಲ್ಯಾಂಡ್‌ಗೆ ತೆರಳಲಿದೆ.

‘ಪ್ರಧಾನಿ ಅವರು ‘ಅಮೃತ ಕಾಲ’ದ  ಬಗ್ಗೆ ಸುಳ್ಳಿನ ಕನಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ, ಹತ್ತು ವರ್ಷಗಳಲ್ಲಿ ದೇಶದಲ್ಲಿ ‘ಅನ್ಯಾಯದ ಕಾಲ’ ನಡೆಯುತ್ತಿದೆ. ರಾಹುಲ್ ಗಾಂಧಿ ಅವರ ಸಂದೇಶವು ಜನರಿಗೆ ತಲುಪುತ್ತದೆ ಎಂಬ ವಿಶ್ವಾಸ ನಮ್ಮದು’ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಶೇ.90 ರಷ್ಟಿರುವ ಬಡಜನತೆಗೆ ನ್ಯಾಯ ಒದಗಿಸುವುದೇ ನಮ್ಮ ಯೋಜನೆ: ರಾಹುಲ್ ಗಾಂಧಿ

ಬಡತನದ ಬೇಗೆಯಲ್ಲಿ ನಲುಗುತ್ತಿರುವ ದೇಶದ ಶೇ.90 ರಷ್ಟು ಬಡವರಿಗೆ ನ್ಯಾಯ ಒದಗಿಸುವ...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...