ಕಾಂಗ್ರೆಸ್‌ನಿಂದ ಎರಡನೇ ಹಂತದ ಭಾರತ್‌ ಜೋಡೋ: ಈ ಬಾರಿ ಗುಜರಾತ್‌ನಿಂದ ಆರಂಭ

Date:

ಎರಡನೇ ಹಂತದ ಭಾರತ್‌ ಜೋಡೋ ಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ರಾಹುಲ್‌ ಗಾಂಧಿಯ ನಾಯಕತ್ವದಲ್ಲಿ ನಡೆಯಲಿರುವ ಈ ಬಾರಿಯ ಯಾತ್ರೆ ಗುಜರಾತ್‌ನಿಂದ ಆರಂಭಗೊಂಡು ಮೇಘಾಲಯದಲ್ಲಿ ಅಂತ್ಯಗೊಳ್ಳಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಎರಡನೇ ಹಂತದ ಭಾರತ್‌ ಜೋಡೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಪಶ್ಚಿಮ ರಾಜ್ಯದ ವಿವಿಧ ಭಾಗಗಳಲ್ಲಿ ಮೆರವಣಿಗೆಯನ್ನು ಮುನ್ನಡೆಸಲಿದ್ದಾರೆ. ಯಾತ್ರೆ ಕೈಗೊಳ್ಳುವ ಬಗ್ಗೆ ಎಐಸಿಸಿ ನಾಯಕರು ಮಾಹಿತಿ ನೀಡಿದ್ದಾರೆ. ವಿವರಗಳನ್ನು ಅಂತಿಮಗೊಳಿಸಲು ಸಮಿತಿಯನ್ನು ರಚಿಸಲಾಗಿದೆ. ಮೆರವಣಿಗೆಯ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ‘ಕೇರಳ’ವನ್ನು ‘ಕೇರಳಂ’ ಎಂದು ಹೆಸರು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯಿಸುವ ನಿರ್ಣಯ ಅಂಗೀಕಾರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ರಾಹುಲ್‌ ಗಾಂಧಿ ಅವರ ಪಾದಯಾತ್ರೆ ಗುಜರಾತ್‌ನ ಪೋರ್‌ಬಂದರ್‌ನಿಂದ ಅರುಣಾಚಲ ಪ್ರದೇಶದ ಪಾಸಿಘಾಟ್‌ ತನಕ ನವೆಂಬರ್‌ ತಿಂಗಳ ಮೊದಲು ಆರಂಭವಾಗಲಿದೆ” ಎಂದು ಹೇಳಿದ್ದರು.

ಮೊದಲ ಹಂತದ ಭಾರತ್‌ ಜೋಡೋ ಯಾತ್ರೆ 2022ರ ಸೆಪ್ಟೆಂಬರ್‌ನಲ್ಲಿ ದಕ್ಷಿಣ ಭಾರತದ ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಉತ್ತರದ ಕಾಶ್ಮೀರದಲ್ಲಿ ಕೊನೆಯಾಗಿತ್ತು. 130 ದಿನಗಳ ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು 4 ಸಾವಿರ ಕಿ.ಮೀವರೆಗೂ ಸಾಗಿತ್ತು. ಈ ಅಭೂತಪೂರ್ವ ಯಾತ್ರೆಯಲ್ಲಿ ದೇಶದ ವಿವಿಧ ಕ್ಷೇತ್ರದ ಸಾವಿರಾರು ಗಣ್ಯರು ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು.

ಲೋಕಸಭೆಯಲ್ಲಿ ಇಂದು(ಆಗಸ್ಟ್ 09) ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಭಾರತ ಒಗ್ಗೂಡಿಸುವ ಯಾತ್ರೆ ಇನ್ನೂ ಮುಗಿದಿಲ್ಲ ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ...

1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು...